ಬೆಂಗಳೂರು:ನಟ ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಸಿನಿಮಾ ಅಮೆಜಾನ್ ಒಟಿಟಿಯಲ್ಲಿ ಬಿಡುಗಡೆಯಾಗಿದೆ.
ಈ ಹಿಂದೆ ನವೆಂಬರ್ 23ಕ್ಕೆ ಸಿನಿಮಾಬಿಡುಗಡೆ ಮಾಡಲಾಗುವುದು ಎಂದು ಚಿತ್ರತಂಡ ಹೇಳಿತ್ತು.ಇದೀಗ ಸಿನಿಮಾ ಬಿಡುಗಡೆಯಾಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಒಂದು ತಿಂಗಳಿಗೆ ಒಟಿಟಿ ವೇದಿಕೆಯಲ್ಲಿ ಕೋಟಿಗೊಬ್ಬ–3 ಸಿನಿಮಾ ಬಿಡುಗಡೆಯಾಗಿರುವುದು ವಿಶೇಷ.
ಶಿವ ಕಾರ್ತಿಕ್ ನಿರ್ದೇಶನದ ಈ ಸಿನಿಮಾವನ್ನು ಸೂರಪ್ಪ ಬಾಬು ನಿರ್ಮಾಣ ಮಾಡಿದ್ದಾರೆ.
ಕಿಚ್ಚ ಸುದೀಪ್, ಮಡೋನಾ ಸೆಬಾಸ್ಟಿಯನ್, ಅಫ್ತಾಬ್ ಶಿವದಾಸಾನಿ, ನವಾಬ್ ಶಾ, ಶ್ರದ್ಧಾ ದಾಸ್, ರವಿಶಂಕರ್ ನಟಿಸಿದ್ದು ಅರ್ಜುನ್ ಜನ್ಯಾ ಸಂಗೀತ ನೀಡಿದ್ದಾರೆ.
ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ ಉತ್ತಮ ಗಳಿಕೆ ಕಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.