ಪೃಥ್ವಿ ಅಂಬಾರ್ ಹಾಗೂ ಧನ್ಯಾ ರಾಮ್‌ಕುಮಾರ್ ಜೋಡಿಯಾಗಿ ನಟಿಸುತ್ತಿರುವ ‘ಚೌಕಿದಾರ್’ ತಂಡಕ್ಕೆ ನಟಿ ಸುಧಾರಾಣಿ ಸೇರ್ಪಡೆಗೊಂಡಿದ್ದಾರೆ. ಶ್ರೀಮುರಳಿ ಅಭಿನಯದ ‘ರಥಾವರ’ ಸಿನಿಮಾ ನಿರ್ದೇಶಿಸಿದ್ದ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನದ ಚಿತ್ರವಿದು.
ಭಿನ್ನ ಪೋಸ್ಟರ್‌ನಿಂದ ಗಮನ ಸೆಳೆದಿರುವ ಚಿತ್ರ ಪ್ರೇಮಕಥಾ ಹಂದರವನ್ನು ಹೊಂದಿದೆ. ‘ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಸಿನಿಮಾವನ್ನು ಇತ್ತೀಚೆಗೆ 10 ದಿನಗಳ ಕಾಲ ಚಿತ್ರೀಕರಿಸಲಾಗಿದೆ. ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದ್ದು, ಸದ್ಯದಲ್ಲಿಯೇ ಮುಂದಿನ ಭಾಗದ ಚಿತ್ರೀಕರಣ ಪ್ರಾರಂಭವಾಗಲಿದೆ’ ಎಂದಿದ್ದಾರೆ ನಿರ್ದೇಶಕರು.
ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಸುಧಾರಾಣಿ ಕಾಣಿಸಿಕೊಂಡಿದ್ದಾರೆ. ಸಾಯಿಕುಮಾರ್, ‘ಲಕ್ಷ್ಮಿ ಮಹಾಲಕ್ಷ್ಮಿ’ ಸಿನಿಮಾ ಖ್ಯಾತಿಯ ಹಿರಿಯ ನಟಿ ಶ್ವೇತಾ, ಧರ್ಮ ಸೇರಿದಂತೆ ಹಲವು ಕಲಾವಿದರು ತಾರಾಗಣದಲ್ಲಿದ್ದಾರೆ. ಪೃಥ್ವಿ ಅಂಬಾರ್ ಈ ಚಿತ್ರದಲ್ಲಿ ರಗಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಕಲ್ಲಹಳ್ಳಿ ಚಂದ್ರಶೇಖರ್ ಬಂಡವಾಳ ಹೂಡಿದ್ದಾರೆ. ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ, ಸಿದ್ದು ಕಂಚನಹಳ್ಳಿ ಛಾಯಾಚಿತ್ರಗ್ರಹಣ, ಜ್ಞಾನೇಶ್ ಬಿ ಮಠದ್ ಸಂಕಲನವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.