ADVERTISEMENT

ನವೆಂಬರ್ 24ಕ್ಕೆ ತೆರೆಯುತ್ತೆ ‘ಶುಗರ್‌ ಫ್ಯಾಕ್ಟರಿ’: ಸೋನಲ್‌, ಕೃಷ್ಣ ನಟನೆ

ಸೋನಲ್‌, ಡಾರ್ಲಿಂಗ್ ಕೃಷ್ಣ ನಟನೆಯ ಸಿನಿಮಾ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2023, 18:45 IST
Last Updated 16 ಅಕ್ಟೋಬರ್ 2023, 18:45 IST
<div class="paragraphs"><p>ಸೋನಲ್‌&nbsp;</p></div>

ಸೋನಲ್‌ 

   

2021ರಲ್ಲಿ ಸೆಟ್ಟೇರಿದ್ದ ನಟ ಡಾರ್ಲಿಂಗ್‌ ಕೃಷ್ಣ ನಟನೆಯ ‘ಶುಗರ್‌ ಫ್ಯಾಕ್ಟರಿ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಇದೇ ನ.24ರಂದು ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಪ್ರಚಾರ ಆರಂಭಿಸಿರುವ ಚಿತ್ರತಂಡ ‘ಜಹಾಪನಾ’ ಎಂಬ ಹಾಡು ಬಿಡುಗಡೆ ಮಾಡಿದೆ. 

ದೀಪಕ್ ಅರಸ್ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬಂದಿದ್ದು, ಜಯಂತ ಕಾಯ್ಕಿಣಿ ಅವರು ‘ಜಹಾಪನಾ’ ಎಂಬ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ನಿಹಾಲ್ ತಾವ್ರೊ ಹಾಗೂ ಅಮೃತಾ ನಾಯಕ್ ಇದಕ್ಕೆ ಧ್ವನಿಯಾಗಿದ್ದಾರೆ. ಧನಂಜಯ್ ಅವರ ನೃತ್ಯ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ಹಾಗೂ ಸೋನಾಲ್ ಮೊಂತೆರೋ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಕಬೀರ್ ರಫಿ ಸಂಗೀತ ನೀಡಿದ್ದಾರೆ. ಡಾರ್ಲಿಂಗ್ ಕೃಷ್ಣ ಅವರ ಸಿನಿಜರ್ನಿಯಲ್ಲೇ ಬಿಗ್ ಬಜೆಟ್ ಚಿತ್ರವೆಂದು ಕರೆಸಿಕೊಳ್ಳುತ್ತಿರುವ ಈ ಸಿನಿಮಾದ ಚಿತ್ರೀಕರಣ ಬೆಂಗಳೂರು ಮತ್ತು ಗೋವಾದಲ್ಲಿ ನಡೆದಿದೆ. 

ADVERTISEMENT

ಆರ್. ಗಿರೀಶ್ ನಿರ್ಮಿಸಿರುವ ಈ ಚಿತ್ರದಲ್ಲಿ ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಾಲ್ ಮಾಂತೆರೋ, ಅದ್ವಿತಿ ಶೆಟ್ಟಿ, ರುಹಾನಿ ಶೆಟ್ಟಿ ನಟಿಸಿದ್ದಾರೆ. ಅದ್ವಿತಿ ಈ ಚಿತ್ರದಲ್ಲಿ ಈವೆಂಟ್‌ ಮ್ಯಾನೇಜರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಂಗಾಯಣ ರಘು, ‘ಲವ್ ಮಾಕ್ಟೇಲ್’ ಅಭಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.