ADVERTISEMENT

ಡಾರ್ಲಿಂಗ್ ಕೃಷ್ಣ ಜನ್ಮದಿನಕ್ಕೆ ‘ಶುಗರ್ ಫ್ಯಾಕ್ಟರಿ’ ಟೀಸರ್‌

​ಪ್ರಜಾವಾಣಿ ವಾರ್ತೆ
Published 10 ಜೂನ್ 2021, 15:43 IST
Last Updated 10 ಜೂನ್ 2021, 15:43 IST
ಡಾರ್ಲಿಂಗ್‌ ಕೃಷ್ಣ ಹಾಗೂ ಸೋನಾಲ್ ಮಾಂಟೆರೊ
ಡಾರ್ಲಿಂಗ್‌ ಕೃಷ್ಣ ಹಾಗೂ ಸೋನಾಲ್ ಮಾಂಟೆರೊ   

ಬೆಂಗಳೂರು: ನಟ ಡಾರ್ಲಿಂಗ್‌ ಕೃಷ್ಣ ಅವರ ಜನ್ಮದಿನದಂದು (ಜೂನ್‌ 12) ‘ಶುಗರ್‌ ಫ್ಯಾಕ್ಟರಿ’ ಚಿತ್ರದ ವಿಡಿಯೊ ಟೀಸರ್‌ ಬಿಡುಗಡೆಯಾಗಲಿದೆ.

ಬೆಂಗಳೂರು ಮತ್ತು ಗೋವಾದಲ್ಲಿ ಚಿತ್ರದ ಚಿತ್ರೀಕರಣ ನಡೆದಿದ್ದು, ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದೆ. ‘ಲಾಕ್‌ಡೌನ್ ಬಳಿಕ, ಚಿತ್ರೀಕರಣಕ್ಕೆ ಅನುಮತಿ ದೊರಕಿದ ಕೂಡಲೇ ಚಿತ್ರೀಕರಣ ಪುನರಾರಂಭವಾಗಲಿದೆ. ಟೀಸರ್‌ನಲ್ಲಿ ಸಾಮಾನ್ಯವಾಗಿ ಪೋಸ್ಟರ್‌ಗಳನ್ನು ಬಳಸಿಕೊಳ್ಳಲಾಗುತ್ತದೆ. ಆದರೆ ನಾವು ವಿಡಿಯೊ ತುಣುಕುಗಳನ್ನು ಬಳಸಿಕೊಂಡು ವಿಭಿನ್ನವಾಗಿ ಟೀಸರ್ ನಿರ್ಮಾಣ ಮಾಡಿದ್ದೇವೆ’ ಎನ್ನುತ್ತಾರೆ ಚಿತ್ರದ ನಿರ್ದೇಶಕ ದೀಪಕ್ ಅರಸ್.

‘ಜೂನ್ 12ರಂದು ಆನಂದ್ ಆಡಿಯೊ ಯೂಟ್ಯೂಬ್‌ ಚಾನಲ್‌ನಲ್ಲಿ ಟೀಸರ್ ಬಿಡುಗಡೆಯಾಗಲಿದೆ. ಜೂನ್ 11ರಂದು ಸಂಜೆ 5 ಗಂಟೆಗೆ ಇನ್‌ಸ್ಟಾಗ್ರಾಂ ಮೂಲಕ ಲೈವ್‌ನಲ್ಲಿ ಚಿತ್ರತಂಡದ ಸದಸ್ಯರು ಟೀಸರ್ ಹಾಗೂ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಮಾಹಿತಿ ನೀಡಲಿದ್ದಾರೆ’ ಎಂದರು. ಚಿತ್ರದ ನಾಯಕಿಯರಾಗಿ ಸೋನಾಲ್ ಮಾಂಟೆರೊ, ಅದ್ವಿತಿ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ‘ಲವ್ ಮಾಕ್ಟೇಲ್’ ಅಭಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ADVERTISEMENT

ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್ ಆರ್. ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.‌ ಚಿತ್ರಕ್ಕೆ ಕಬೀರ್ ರಫಿ ಸಂಗೀತ ನಿರ್ದೇಶನ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಅರ್ಜುನ್ ಸಾಹಸ ನಿರ್ದೇಶನ ಹಾಗೂ ‌ಧನಂಜಯ್ ಅವರ ನೃತ್ಯ ನಿರ್ದೇಶನವಿದೆ. ಚೇತನ್ ಕುಮಾರ್ ಹಾಗೂ ಯೋಗಾನಂದ್ ಮುದ್ದಾನ್ ಸಂಭಾಷಣೆ ಬರೆದಿದ್ದಾರೆ. v

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.