ನಟ ದರ್ಶನ್, ಅಂಬರೀಷ್
ಚಿತ್ರ: ಇನ್‌ಸ್ಟಾಗ್ರಾಂ
ಇಂದು (ಫೆ.16) ನಟ ದರ್ಶನ್ ತೂಗುದೀಪ ಅವರ ಹುಟ್ಟುಹಬ್ಬ. ಹೀಗಾಗಿ ಕುಟುಂಬಸ್ಥರು, ಸ್ನೇಹಿತರು ಹಾಗೂ ಅಭಿಮಾನಿಗಳು ನಟ ದರ್ಶನ್ ಅವರಿಗೆ ಶುಭ ಹಾರೈಸುತ್ತಿದ್ದಾರೆ. ಸುಮಲತಾ ಅಂಬರೀಷ್ ಅವರು ದರ್ಶನ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದನ್ನು ಸುಮಲತಾ ಅಂಬರೀಷ್ ಅವರು ಹಂಚಿಕೊಂಡಿದ್ದಾರೆ. ಅದರ ಜೊತೆಗೆ ‘ಚಾಲೆಂಜಿಂಗ್ ಸ್ಟಾರ್ ಪ್ರೀತಿಯ ದರ್ಶನ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಆ ದೇವರು ನಿಮ್ಮ ಸಂಕಷ್ಟಗಳನ್ನೆಲ್ಲ ದೂರ ಮಾಡಲಿ, ಇನ್ನೂ ಹೆಚ್ಚಿನ ಕಲಾ ಸೇವೆಗಾಗಿ ಉತ್ತಮ ಆಯುಷ್ಯ, ಆರೋಗ್ಯ ಮತ್ತು ಯಶಸ್ಸನ್ನು ನೀಡಲಿ ಎಂದು ಹಾರೈಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.
ಸುಮಲತಾ ಅಂಬರೀಷ್ ಅವರು ಹಂಚಿಕೊಂಡ ಪೋಸ್ಟ್‌ನಲ್ಲಿ ಅಂಬರೀಷ್ ಹಾಗೂ ದರ್ಶನ್ ಒಟ್ಟಿಗೆ ನಿಂತುಕೊಂಡಿದ್ದಾರೆ. ಬುಲ್ ಬುಲ್ ಸಿನಿಮಾದ ವೇಳೆ ಕ್ಲಿಕ್ಕಿಸಿದ ಫೋಟೊವನ್ನೇ ದರ್ಶನ್ ಅವರ ಹುಟ್ಟುಹಬ್ಬಕ್ಕೆ ಹಂಚಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.