
ನಟ ದರ್ಶನ್, ಸುಮಲತಾ ಅಂಬರೀಷ್
ಬೆಂಗಳೂರು: ನಟ ದರ್ಶನ್ ಅಭಿನಯದ ಬಹುನಿರೀಕ್ಷಿತ ಡೆವಿಲ್ ಸಿನಿಮಾ ಇಂದು (ಗುರುವಾರ) ಬಿಡುಗಡೆಯಾಗಿ, ಉತ್ತಮ ಪ್ರದರ್ಶನ ನೀಡುತ್ತಿದೆ. ಈ ನಡುವೆ ಮಾಜಿ ಸಂಸದೆ ಹಾಗೂ ನಟಿ ಸುಮಲತಾ ಅಂಬರೀಷ್ ಅವರು ಸಿನಿಮಾಗೆ ಶುಭಾಶಯ ತಿಳಿಸಿದ್ದಾರೆ.
ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗಿದ್ದು, ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದರ ಮಧ್ಯೆ ಸಿನಿಮಾ ರಿಲೀಸ್ ಆದ ಬೆನ್ನಲ್ಲೇ ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಸುಮಲತಾ ಅಂಬರೀಷ್ ಅವರು ಶುಭಕೋರಿದ್ದಾರೆ.
‘ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಡೆವಿಲ್ ತಂಡಕ್ಕೆ ನನ್ನ ಹೃತ್ಪೂರ್ವಕ ಶುಭಾಶಯಗಳು. ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಮತ್ತು ಅಭಿಮಾನಿಗಳ ಹೃದಯಗಳಲ್ಲಿ ಘರ್ಜಿಸಲಿ. ಡೆವಿಲ್ ಸಿನಿಮಾದ ಪವರ್ಹೌಸ್ ತಂಡಕ್ಕೆ ಶುಭಾಶಯ, ಇದು ಬ್ಲಾಕ್ಬಸ್ಟರ್ ಸಕ್ಸಸ್’ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಸಿನಿಮಾದಲ್ಲಿ ದರ್ಶನ್ ಅವರು ಧನುಷ್ ಹಾಗೂ ಕೃಷ್ಣ ಎಂಬ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಎರಡೂ ಪಾತ್ರಗಳು ತದ್ವಿರುದ್ಧವಾಗಿವೆ. ಇದರಲ್ಲಿ ನಟ ದರ್ಶನ್ ಡೈಲಾಗ್, ಸ್ಟೈಲ್ ಎಲ್ಲವೂ ಅಭಿಮಾನಿಗಳ ಗಮನ ಸೆಳೆದಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಸಕ್ಸಸ್ ಆಗುತ್ತಾ ಎಂದು ಕಾದು ನೋಡಬೇಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.