ಮಂಡ್ಯ: ಬಾಲಿವುಡ್ ನಟಿ ಸನ್ನಿಲಿಯೋನ್ ಹುಟ್ಟು ಹಬ್ಬದ ಶುಭಾಶಯ ಕೋರಿ ರಸ್ತೆಯ ಪಕ್ಕದಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದು ತಾಲ್ಲೂಕಿನ ಕೊಮ್ಮೇರಹಳ್ಳಿಯಲ್ಲಿ ಹಾಕಲಾಗಿತ್ತು ಎನ್ನುವ ವಿಷಯ ತಡವಾಗಿ ಗೊತ್ತಾಗಿದೆ.
‘ಹ್ಯಾಪಿ ಬರ್ತಡೆ ಸನ್ನಿಲಿಯೋನ್’, ‘ಅನಾಥ ಮಕ್ಕಳ ತಾಯಿ, ಅಭಿಮಾನಿಗಳ ದೇವತೆ’ ಎಂದು ಬರೆದಿದ್ದ ಫ್ಲೆಕ್ಸ್ ಫೋಟೋ ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅದು ಮಂಡ್ಯ ತಾಲ್ಲೂಕಿನ ಕೊಮ್ಮೇರಹಳ್ಳಿ ಗ್ರಾಮದಲ್ಲಿ ಹಾಕಲಾಗಿತ್ತು. ಸನ್ನಿಲಿಯೋನ್ ಅವರು ನಟನೆ ಮಾತ್ರವಲ್ಲದೆ ಹಲವಾರು ಸಾಮಾಜಿಕ, ಮಾನವೀಯ ಕೆಲಸಗಳನ್ನು ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮದ ಅಭಿಮಾನಿಗಳು ಫ್ಲೆಕ್ಸ್ ಹಾಕಿಸಿ ಅಭಿಮಾನ ಮೆರೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.