ADVERTISEMENT

ಹುಟ್ಟುಹಬ್ಬದ ಸಂಭ್ರಮದಲ್ಲಿ ಸೂಪರ್‌ಸ್ಟಾರ್ ರಜನಿಕಾಂತ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಡಿಸೆಂಬರ್ 2021, 7:42 IST
Last Updated 12 ಡಿಸೆಂಬರ್ 2021, 7:42 IST
ನಟ ರಜನಿಕಾಂತ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ
ನಟ ರಜನಿಕಾಂತ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ   

ಬೆಂಗಳೂರು: ನಟ ರಜನಿಕಾಂತ್ ಅವರಿಗೆ ಭಾನುವಾರ ಡಿಸೆಂಬರ್ 12ರಂದು ಹುಟ್ಟುಹಬ್ಬದ ಸಂಭ್ರಮ. ಸೂಪರ್‌ಸ್ಟಾರ್ 71ನೇ ವರ್ಷಕ್ಕೆ ಕಾಲಿರಿಸುತ್ತಿದ್ದಾರೆ.

ಸಾಮಾಜಿಕ ತಾಣಗಳಲ್ಲಿ ಕೂಡ ಅತ್ಯಂತ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ರಜನಿಕಾಂತ್ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

ಬೆಂಗಳೂರಿನಲ್ಲಿ ಜನಿಸಿದ ರಜನಿಕಾಂತ್, ಆರಂಭದಲ್ಲಿ ಬಿಎಂಟಿಸಿ ಬಸ್‌ನಲ್ಲಿ ನಿರ್ವಾಹಕರಾಗಿಯೂ ಕಾರ್ಯನಿರ್ವಹಿಸಿದ್ದರು.

ADVERTISEMENT

1975ರಲ್ಲಿ ಕೆ. ಬಾಲಚಂದರ್ ಅವರ ತಮಿಳು ಸಿನಿಮಾ ಅಪೂರ್ವ ರಾಗಂಗಳ್ ಮೂಲಕ ಅವರು ಚಿತ್ರರಂಗ ಪ್ರವೇಶಿಸಿದರು.

ರಜನಿಕಾಂತ್ ಅವರು ಸಿನಿಮಾ ಕ್ಷೇತ್ರದಲ್ಲಿ ಸಲ್ಲಿಸಿದ ಸಾಧನೆಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, ಪದ್ಮ ವಿಭೂಷಣ, ಎನ್‌ಟಿಆರ್ ರಾಷ್ಟ್ರೀಯ ಪ್ರಶಸ್ತಿ, ಪದ್ಮ ಭೂಷಣ ಮತ್ತು ಹಲವಾರು ಪ್ರಶಸ್ತಿಗಳು ಸಂದಿವೆ.

ಇತ್ತೀಚೆಗೆ ರಜನಿಕಾಂತ್ ಅವರ ಅಣ್ಣಾತ್ತೆ ಸಿನಿಮಾ ಬಿಡುಗಡೆಯಾಗಿದ್ದು, ಬಳಿಕ ಅಮೆಜಾನ್ ಪ್ರೈಮ್‌ನಲ್ಲಿ ಲಭ್ಯವಾಗಿದೆ.



ರಜನಿ ಹುಟ್ಟುಹಬ್ಬ: 71 ಅಡಿ ಉದ್ದದ ಕೇಕ್ ಕತ್ತರಿಸಿದ ಅಭಿಮಾನಿಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.