ADVERTISEMENT

’ಉದಯ‍‍ಪುರ ಫೈಲ್ಸ್’ 6 ದೃಶ್ಯಕ್ಕೆ ಕತ್ತರಿ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಮಾಹಿತಿ

ಪಿಟಿಐ
Published 21 ಜುಲೈ 2025, 14:44 IST
Last Updated 21 ಜುಲೈ 2025, 14:44 IST
ಉದಯಪುರ ಫೈಲ್ಸ್‌ 
ಉದಯಪುರ ಫೈಲ್ಸ್‌    

ನವದೆಹಲಿ: ‘ಉದಯಪುರ ಫೈಲ್ಸ್‌’ ಚಿತ್ರದ ಆರು ದೃಶ್ಯಗಳ ಭಾಗಗಳನ್ನು ತೆಗೆದು ಹಾಕಲು ಸೂಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಸೋಮವಾರ ತಿಳಿಸಿದೆ. 

‘ಸಕ್ಷಮ ಪ್ರಾಧಿಕಾರವು ಶಿಫಾರಸು ಮಾಡಿದ್ದಕ್ಕಿಂತ ಹೆಚ್ಚಿನ ಕ್ರಮ ಕೈಗೊಳ್ಳುವುದು ಸಂವಿಧಾನದ 19ನೇ ವಿಧಿಯ ಉಲ್ಲಂಘನೆಯಾಗುತ್ತದೆ. ನಾನು ಆದೇಶವನ್ನು ಪರಿಶೀಲಿಸಿದ್ದೇನೆ’ ಎಂದು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು ಪೀಠಕ್ಕೆ ತಿಳಿಸಿದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಹಾಗೂ ಜಾಯ್‌ ಮಾಲ್ಯ ಬಾಗ್ಚಿ ಅವರಿದ್ದ ಪೀಠವು, ಮುಂದಿನ ಆದೇಶದವರೆಗೆ ಚಿತ್ರ ಬಿಡುಗಡೆಗೆ ನೀಡಿರುವ ತಡೆಯಾಜ್ಞೆಯನ್ನು ವಿಸ್ತರಿಸಿ ಆದೇಶಿಸಿತು. ವಿಚಾರಣೆಯನ್ನು ಜುಲೈ 24ಕ್ಕೆ ಮುಂದೂಡಿತು. 

ADVERTISEMENT

ಟೈಲರ್‌ ಕನ್ಹಯ್ಯಾ ಲಾಲ್‌ ಅವರ ಹತ್ಯೆಯ ಘಟನೆಯನ್ನು ಆಧಾರವಾಗಿಟ್ಟುಕೊಂಡು ಈ ಚಿತ್ರ ನಿರ್ಮಿಸಲಾಗಿದೆ. ಚಿತ್ರ ಬಿಡುಗಡೆಗೆ ತಡೆ ನೀಡುವಂತೆ ಕೋರಿ ಹತ್ಯೆ ಆರೋಪಿ ಮೊಹಮ್ಮದ್‌ ಜಾವೇದ್‌ ಪರ ವಕೀಲರು ಮನವಿ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.