
ಪ್ರಜಾವಾಣಿ ವಾರ್ತೆ
ತಮಿಳು ನಟ ಸೂರ್ಯ ಅವರ ‘46’ನೇ ಚಿತ್ರದ ಚಿತ್ರೀಕರಣ ಇತ್ತೀಚೆಗಷ್ಟೇ ಮುಕ್ತಾಯಗೊಂಡಿದೆ. ವೆಂಕಿ ಅಟ್ಲೂರಿ ನಿರ್ದೇಶನದ ಚಿತ್ರದ ಶೀರ್ಷಿಕೆ ಇನ್ನಷ್ಟೇ ಘೋಷಣೆಯಾಗಬೇಕಿದೆ.
ವೆಂಕಿ ಅಟ್ಲೂರಿ ಈ ಹಿಂದೆ ದುಲ್ಕರ್ ಸಲ್ಮಾನ್ ನಟನೆಯ ‘ಲಕ್ಕಿ ಭಾಸ್ಕರ’ ಚಿತ್ರ ನಿರ್ದೇಶಿಸಿದ್ದರು. ಅದರ ಯಶಸ್ಸಿನ ಬೆನ್ನಲ್ಲೇ ಸೂರ್ಯ, ಅಟ್ಲೂರಿ ಜತೆ ಕೈಜೋಡಿಸಿ 2025ರ ಮೇ ತಿಂಗಳಲ್ಲಿ ಚಿತ್ರ ಸೆಟ್ಟೇರಿತ್ತು. ಮಲಯಾಳದ ಮಮಿತಾ ಬೈಜು ಈ ಚಿತ್ರದ ನಾಯಕಿ.
ನಾಗವಂಶಿ ಮತ್ತು ಸಾಯಿ ಸೌಜನ್ಯ ಸಿತಾರ ಎಂಟರ್‌ಟೈನ್‌ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ನಿಮಿಶ್ ರವಿ ಛಾಯಾಚಿತ್ರಗ್ರಹಣ, ಜಿ.ವಿ.ಪ್ರಕಾಶ್ ಸಂಗೀತ ಸಂಯೋಜನೆಯಿದ್ದು, ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಾರಂಭಗೊಂಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.