ADVERTISEMENT

ಸೂರ್ಯ ಅಭಿನಯದ ‘ಕಂಗುವ’ಗೆ ಗ್ರಾಫಿಕ್ಸ್‌ ಮೆರುಗು

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2023, 23:00 IST
Last Updated 16 ಏಪ್ರಿಲ್ 2023, 23:00 IST
   

‘ಬಾಹುಬಲಿ’,‘ಆರ್‌ಆರ್‌ಆರ್‌’ನಂತಹ ದೊಡ್ಡ ಬಜೆಟ್‌ನ ಸಿನಿಮಾಗಳ ಸಾಲಿಗೆ ಸೇರುವ ತಮಿಳು ನಟ ಸೂರ್ಯ ಅವರ ಚಿತ್ರವೊಂದು ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಘೋಷಣೆಯಾಗಿತ್ತು. ತಮಿಳು, ತೆಲುಗಿನ ಜನಪ್ರಿಯ ನಿರ್ದೇಶಕ ಶಿವ ನಿರ್ದೇಶನದ ಈ ಚಿತ್ರಕ್ಕೆ ‘ಕಂಗುವ’ಎಂದು ಹೆಸರಿಡಲಾಗಿದೆ. ಚಿತ್ರದ ಮೋಷನ್‌ ಪೋಸ್ಟರ್‌ ಬಿಡುಗಡೆಗೊಂಡಿದ್ದು, ಭರ್ಜರಿ ಗ್ರಾಫಿಕ್ಸ್‌ ಹೊಂದಿರುವ ಕಾಲ್ಪನಿಕ ಜಗತ್ತಿನ ಚಿತ್ರ ಎಂದು ಮೇಲ್ನೋಟಕ್ಕೆ ತಿಳಿಯುತ್ತಿದೆ.

‘ಕಂಗುವ ಎಂದರೆ, ಬೆಂಕಿಯ ಶಕ್ತಿಯುಳ್ಳವನು. ಚಿತ್ರದಲ್ಲಿ ಸೂಪರ್ ಹೀರೋ ಆಗಿರುವ ನಾಯಕ, ಹಲವು ಅವತಾರಗಳಲ್ಲಿ ಕಾಣಿಸಿಕೊಳ್ಳುತ್ತಾನೆ. ಈ ಚಿತ್ರದಲ್ಲಿ ಸಾಕಷ್ಟು ಗ್ರಾಫಿಕ್ಸ್‌ ಇದೆ. ಹೀಗಾಗಿ ಚಿತ್ರೀಕರಣದ ನಂತರದ ಕೆಲಸಗಳು ಹೆಚ್ಚಿವೆ. ಮುಂದಿನ ವರ್ಷದ ಪ್ರಾರಂಭದಲ್ಲಿ 3ಡಿ ಅವತರಣಿಕೆಯಲ್ಲಿ 10 ಭಾಷೆಗಳಲ್ಲಿ ಬಿಡುಗಡೆಗೊಳ್ಳುತ್ತಿದೆ’ ಎಂದು ಚಿತ್ರತಂಡ ಹೇಳಿದೆ.
ಚಿತ್ರದಲ್ಲಿ ನಾಯಕಿಯಾಗಿ ಬಾಲಿವುಡ್ ಬೆಡಗಿ ದಿಶಾ ಪಟಾನಿ ನಟಿಸುತ್ತಿದ್ದಾರೆ. ಯೋಗಿ ಬಾಬು ಮುಂತಾದವರು ಪ್ರಮುಖ ಪಾತ್ರಗಳಲ್ಲಿದ್ದಾರೆ. ಕೆ.ಇ. ಜ್ನಾನ ವೇಲ್ ರಾಜ ನಿರ್ಮಿಸಿರುವ ಚಿತ್ರಕ್ಕೆ ವೆಟ್ರಿ ಪಳನಿಸಾಮಿ ಅವರ ಛಾಯಾಗ್ರಹಣ ಮತ್ತು ದೇವಿ ಶ್ರೀಪ್ರಸಾದ್ ಅವರ ಸಂಗೀತವಿದೆ. ಈಗಾಗಲೇ ಗೋವಾ, ಚೆನ್ನೈ ಮುಂತಾದ ಕಡೆ ಚಿತ್ರದ ಶೇ 50ರಷ್ಟು ಚಿತ್ರೀಕರಣ ಮುಗಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.