ADVERTISEMENT

ಟೀಂ ಇಂಡಿಯಾದ ನಾಯಕ ನನಗೆ ಆಗಾಗ ಸಂದೇಶ ಕಳಿಸುತ್ತಿದ್ದರು: ನಟಿ ಖುಷಿ ಮುಖರ್ಜಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಡಿಸೆಂಬರ್ 2025, 12:44 IST
Last Updated 30 ಡಿಸೆಂಬರ್ 2025, 12:44 IST
<div class="paragraphs"><p>ನಟಿ ಖುಷಿ ಮುಖರ್ಜಿ</p></div>

ನಟಿ ಖುಷಿ ಮುಖರ್ಜಿ

   

ಚಿತ್ರ: @imD12kunal

ಭಾರತ ಟಿ20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ಈ ಹಿಂದೆ ನನಗೆ ಆಗಾಗ ಸಂದೇಶಗಳನ್ನು ಕಳುಹಿಸುತ್ತಿದ್ದರು ಎಂದು ನಟಿ, ರೂಪದರ್ಶಿ ಖುಷಿ ಮುಖರ್ಜಿ ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದಾರೆ.

ADVERTISEMENT

ಇತ್ತೀಚಿಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಖುಷಿ ಮುಖರ್ಜಿ, ‘ಸೂರ್ಯಕುಮಾರ್ ಅವರು ಈ ಹಿಂದೆ ಆಗಾಗ ನನಗೆ ಸಂದೇಶ ಕಳುಹಿಸುತ್ತಿದ್ದರು, ಆದರೆ, ಈಗ ಅವರು ನನ್ನ ಸಂಪರ್ಕದಲ್ಲಿಲ್ಲ’ ಎಂದು ಹೇಳಿದ್ದಾರೆ.

ಕ್ರಿಕೆಟಿಗರೊಂದಿಗೆ ಡೇಟಿಂಗ್ ಮಾಡಲು ಬಯಸುತ್ತೀರಾ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಖುಷಿ, ‘ನಾನು ಯಾವುದೇ ಆಟಗಾರನೊಂದಿಗೆ ಡೇಟಿಂಗ್ ಮಾಡಲು ಬಯಸುವುದಿಲ್ಲ, ಈ ಹಿಂದೆ ಕೆಲವು ಕ್ರಿಕೆಟಿಗರು ನನ್ನ ಸಂಪರ್ಕದಲ್ಲಿದ್ದರು. ಸೂರ್ಯಕುಮಾರ್ ಯಾದವ್ ನನಗೆ ತುಂಬಾ ಸಂದೇಶ ಕಳುಹಿಸುತ್ತಿದ್ದರು’ ಎಂದು ಖುಷಿ ತಿಳಿಸಿದ್ದಾರೆ.

‘ಈಗ ನಾವು ಹೆಚ್ಚು ಮಾತನಾಡುವುದಿಲ್ಲ ಮತ್ತು ಯಾರೊಂದಿಗೂ ಸಂಪರ್ಕ ಹೊಂದುವುದು ನನಗೆ ಇಷ್ಟವಿಲ್ಲ’ ಎಂದು ಅವರು ಹೇಳಿದರು.

ನಟಿ ಖುಷಿ ಮುಖರ್ಜಿ ಹೇಳಿಕೆಗೆ ಸೂರ್ಯಕುಮಾರ್ ಯಾದವ್ ಅವರು ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸೂರ್ಯಕುಮಾರ್ ಮತ್ತು ಅವರ ಪತ್ನಿ ದೇವಿಶಾ ಶೆಟ್ಟಿ ಇತ್ತೀಚೆಗೆ ಆಂಧ್ರಪ್ರದೇಶದ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ, ವೈಕುಂಠ ಏಕಾದಶಿಯ ಪ್ರಾರ್ಥನೆ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.