ADVERTISEMENT

ಬಾಲಿವುಡ್​​ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮರಣೋತ್ತರ ಪರೀಕ್ಷೆ ವರದಿಯಲ್ಲೇನಿದೆ?

ಏಜೆನ್ಸೀಸ್
Published 15 ಜೂನ್ 2020, 7:29 IST
Last Updated 15 ಜೂನ್ 2020, 7:29 IST
ಬಾಲಿವುಡ್​​ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್
ಬಾಲಿವುಡ್​​ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್   

ಮುಂಬೈ: ಬಾಲಿವುಡ್​​ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಮುಂಬೈನ ಬಾಂದ್ರಾ ನಿವಾಸದಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಮರಣೋತ್ತರ ಪರೀಕ್ಷೆಯಲ್ಲಿ ಸುಶಾಂತ್ ಸಿಂಗ್ ರಜಪೂತ್ ಅವರು ನೇಣು ಬಿಗಿದುಕೊಂಡಿದ್ದರಿಂದಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆ ಮಾಡಿಕೊಂಡಿದ್ದ 34 ವರ್ಷದ ನಟನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿತ್ತು. ಮುಂಬೈನ ಡಾ. ಆರ್‌.ಎನ್. ಕೂಪರ್ ಮುನ್ಸಿಪಲ್ ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು. ಆಸ್ಪತ್ರೆಯು ಸೋಮವಾರ ಮುಂಗಡ ಪ್ರಮಾಣಪತ್ರವನ್ನು ಬಿಡುಗಡೆ ಮಾಡಿದೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಶಾಂತ್ ಕಳೆದ ಆರು ತಿಂಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು. ಅವರ ಒಳಾಂಗಗಳ ಮಾದರಿಗಳನ್ನು ರಾಸಾಯನಿಕ ವಿಶ್ಲೇಷಣೆಗಾಗಿ ಸಂರಕ್ಷಿಸಲಾಗಿದೆ ಮತ್ತು ಅದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತದೆ.

ಇಂದು ಅವರ ಅಂತ್ಯಕ್ರಿಯೆಗಾಗಿ ಸುಶಾಂತ್ ಅವರ ಕುಟುಂಬ ಸದಸ್ಯರು ಪಾಟ್ನಾದಿಂದ ಭಾನುವಾರ ರಾತ್ರಿ ಮುಂಬೈಗೆ ಆಗಮಿಸಿದ್ದಾರೆ. ಸುಶಾಂತ್ ಅವರ ನಿವಾಸದಲ್ಲಿ ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲದ ಕಾರಣದಿಂದಾಗಿ ಅವರ ಆತ್ಮಹತ್ಯೆಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದಾಗ್ಯೂ, ಪೊಲೀಸರು ಅವರ ವೈದ್ಯಕೀಯ ದಾಖಲೆಗಳು ಸೇರಿದಂತೆ ಕೆಲವು ವಸ್ತುಗಳನ್ನು ತನಿಖೆಗಾಗಿ ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.