ಮೋಹಕ ತಾರೆ ನಟಿ ರಮ್ಯಾ ತಮ್ಮ ಆಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ನಿರ್ಮಾಣ ಮಾಡುತ್ತಿರುವ ಚೊಚ್ಚಲ ಚಿತ್ರ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.ರಾಜ್ ಬಿ. ಶೆಟ್ಟಿ ಈ ಸಿನಿಮಾ ನಿರ್ದೇಶನ ಮಾಡುವುದರ ಜತೆಗೆ ಮುಖ್ಯಭೂಮಿಕೆಯಲ್ಲಿಯೂ ನಟಿಸಿದ್ದಾರೆ. ಸಿರಿ ರವಿಕುಮಾರ್ ನಾಯಕಿ. ಬಾಲಾಜಿ ಮನೋಹರ್, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಸ್ನೇಹಾ ಶರ್ಮಾ, ಜೆಪಿ ತೂಮಿನಾಡ್, ಗೋಪಾಲಕೃಷ್ಣ ದೇಶಪಾಂಡೆ ತಾರಾಗಣದಲ್ಲಿದ್ದಾರೆ.ಪ್ರವೀಣ್ ಶ್ರೀಯಾನ್ ಛಾಯಾಗ್ರಹಣ ಮತ್ತು ಸಂಕಲನದ ಜವಾಬ್ದಾರಿ ಹೊತ್ತರೆ, ಮಿಧುನ್ ಮುಕುಂದನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಒಂದು ಪ್ರಬುದ್ಧ ಲವ್ಸ್ಟೋರಿ. ಒಂದು ಭಾವುಕ ಪ್ರಯಾಣ.ಈ ಭಾವುಕ ಜರ್ನಿ ಹೇಗಿರಲಿದೆ ಎಂಬುದನ್ನು ಹೇಳಲೆಂದೇ ಇತ್ತೀಚೆಗೆ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿತ್ತು. ಇದೀಗ ಇದೇ ಚಿತ್ರದ ಒಂದಿಷ್ಟು ಅಪರೂಪದ ಚಿತ್ರಗಳು ಇಲ್ಲಿವೆ.
ಪ್ರಜಾವಾಣಿ ವಾರ್ತೆ
Published 1 ಜನವರಿ 2023, 10:04 IST
Last Updated 1 ಜನವರಿ 2023, 10:04 IST
ಮೋಹಕ ತಾರೆ ನಟಿ ರಮ್ಯಾ ತಮ್ಮ ಆಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ನಿರ್ಮಾಣ ಮಾಡುತ್ತಿರುವ ಚೊಚ್ಚಲ ಚಿತ್ರ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.
ರಾಜ್ ಬಿ. ಶೆಟ್ಟಿ ಈ ಸಿನಿಮಾ ನಿರ್ದೇಶನ ಮಾಡುವುದರ ಜತೆಗೆ ಮುಖ್ಯಭೂಮಿಕೆಯಲ್ಲಿಯೂ ನಟಿಸಿದ್ದಾರೆ. ಸಿರಿ ರವಿಕುಮಾರ್ ನಾಯಕಿ.
ಪ್ರವೀಣ್ ಶ್ರೀಯಾನ್ ಛಾಯಾಗ್ರಹಣ ಮತ್ತು ಸಂಕಲನದ ಜವಾಬ್ದಾರಿ ಹೊತ್ತರೆ, ಮಿಧುನ್ ಮುಕುಂದನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಒಂದು ಪ್ರಬುದ್ಧ ಲವ್ಸ್ಟೋರಿ. ಒಂದು ಭಾವುಕ ಪ್ರಯಾಣ.
ಈ ಭಾವುಕ ಜರ್ನಿ ಹೇಗಿರಲಿದೆ ಎಂಬುದನ್ನು ಹೇಳಲೆಂದೇ ಇತ್ತೀಚೆಗೆ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿತ್ತು. ಇದೀಗ ಇದೇ ಚಿತ್ರದ ಒಂದಿಷ್ಟು ಅಪರೂಪದ ಚಿತ್ರಗಳು ಇಲ್ಲಿವೆ.