ADVERTISEMENT

ಕಾರು ಅಪಘಾತ: ತಮಿಳು ಹಾಸ್ಯ ನಟ ಮನೋ ನಿಧನ 

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2019, 6:09 IST
Last Updated 30 ಅಕ್ಟೋಬರ್ 2019, 6:09 IST
ನಟ ಮನೋ
ನಟ ಮನೋ   

ಚೆನ್ನೈ: ತಮಿಳು ಹಾಸ್ಯ ನಟ ಮನೋ ಅವರುಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಕಾರು ನಿಯಂತ್ರಣ ಕಳೆದುಕೊಂಡು ಅವಘಡ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡಿದ್ದ ಮನೋ, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಘಟನೆಯಲ್ಲಿ ಮನೋ ಅವರ ಪತ್ನಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನುರಾಮಚಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ. ದಂಪತಿಗೆ ಏಳು ವರ್ಷದ ಮಗ ಇದ್ದಾನೆ.

ಮನೋ ನಿಧನಕ್ಕೆ ಚಿತ್ರರಂಗದ ಗಣ್ಯರು ಸೇರಿದಂತೆ ಸ್ನೇಹಿತರು ಸಂತಾಪ ಸೂಚಿಸಿದ್ದಾರೆ.

2010ರಲ್ಲಿ ತೆರಕಂಡಿದ್ದ ‘ಫಜಲ್‘ ಚಿತ್ರದಲ್ಲಿ ಮನೋ ಪ್ರಮುಖ ಪಾತ್ರ ನಿರ್ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.