ಚಿತ್ರದ ಪೋಸ್ಟರ್
ಚೆನ್ನೈ: ತಮಿಳು ನಟ ಸೂರ್ಯ ನಟನೆಯ 44ನೇ ಚಿತ್ರಕ್ಕೆ ರೆಟ್ರೊ ಎಂದು ಹೆಸರಿಡಲಾಗಿದೆ ಎಂದು ಚಿತ್ರತಂಡ ಬುಧವಾರ ಘೋಷಿಸಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಸೂರ್ಯ ಮಾಹಿತಿ ನೀಡಿದ್ದಾರೆ.
ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಸೂರ್ಯ ನಟನೆಯ 44ನೇ ಚಿತ್ರಕ್ಕೆ ರೆಟ್ರೊ ಎಂದು ಹೆಸರಿಡಲಾಗಿದೆ. ಮುಂದಿನ ವರ್ಷ ಚಿತ್ರ ತೆರೆಗೆ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ.
ಈ ಚಿತ್ರಕ್ಕೆ ‘ಜಿಗರ್‌ತಂಡ ಡಬಲ್ಎಕ್ಸ್‘ ಖ್ಯಾತಿಯ ಕಾರ್ತಿಕ್ ಸುಬ್ಬರಾಜ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸೂರ್ಯಗೆ ಜೋಡಿಯಾಗಿ ನಟಿ ಪೂಜಾ ಹೆಗ್ಡೆ ಕಾಣಿಸಿಕೊಳ್ಳಲಿದ್ದಾರೆ. ಮಾರ್ಚ್ 28ರಂದು ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು.
ರೆಟ್ರೊ ಸಿನಿಮಾವನ್ನು ಸೂರ್ಯ ಅವರ 2ಡಿ ಎಂಟರ್‌ಟೈನ್‌ಮೆಂಟ್ ಮತ್ತು ಸುಬ್ಬರಾಜ್ ಅವರ ಸ್ಟೋನ್ ಬೆಂಚ್ ಕ್ರಿಯೇಷನ್ಸ್ ಅಡಿಯಲ್ಲಿ ನಿರ್ಮಿಸುತ್ತಿದ್ದಾರೆ.
ಇತ್ತೀಚೆಗೆ ಸೂರ್ಯ ಅಭಿನಯದ ‘ಕಂಗುವ’ ಸಿನಿಮಾವು ವಿಶ್ವದಾದ್ಯಂತ ಬಿಡುಗಡೆಯಾಗಿತ್ತು. ರಜನಿಕಾಂತ್ ಅವರ ‘ಅಣ್ಣಾತ್ತೆ’ ಸೇರಿದಂತೆ ಹಿಟ್ ಸಿನಿಮಾಗಳನ್ನು ನೀಡಿದ್ದ ಶಿವ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.