ADVERTISEMENT

ತೆಲುಗು ನಟ ಫಿಶ್ ವೆಂಕಟ್ ನಿಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಜುಲೈ 2025, 5:37 IST
Last Updated 19 ಜುಲೈ 2025, 5:37 IST
<div class="paragraphs"><p>ಫಿಶ್ ವೆಂಕಟ್</p></div>

ಫಿಶ್ ವೆಂಕಟ್

   

ಬೆಂಗಳೂರು: ತೆಲುಗು ಚಿತ್ರರಂಗದ ನಟ ಫಿಶ್ ವೆಂಕಟ್ ಅವರು ನಿಧನರಾಗಿದ್ದಾರೆ. ಅವರಿಗೆ 53 ವರ್ಷ ವಯಸ್ಸಾಗಿತ್ತು.

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಹೈದರಾಬಾದ್‌ನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗಲಿಲ್ಲ ಎಂದು ವರದಿಗಳು ತಿಳಿಸಿವೆ.

ADVERTISEMENT

ನಟ ಫಿಶ್ ವೆಂಕಟ್ ಅವರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಮಚಲಿಪಟ್ಟಣಂ ಮೂಲದ ವೆಂಕಟ್ ಅವರ ಮೂಲ ಹೆಸರು ಮಂಗಳಪಲ್ಲಿ ವೆಂಕಟೇಶ್. ಹೈದರಾಬಾದ್‌ನಲ್ಲಿ ಮೀನು ವ್ಯಾಪಾರ ಮಾಡುತ್ತಿದ್ದ ಅವರು 2000 ರಲ್ಲಿ ಸಿನಿಮಾಗಳಲ್ಲಿ ಅಭಿನಯಿಸಲು ಶುರು ಮಾಡಿದರು. ಖುಷಿ, ಆದಿ, ಗಬ್ಬರ್ ಸಿಂಗ್ ಸೇರಿದಂತೆ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಹೆಚ್ಚಾಗಿ ಹಾಸ್ಯ ಪಾತ್ರ, ಖಳನಾಯಕನ ಸಂಗಡಿಗನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದರು.

ಅನಾರೋಗ್ಯಕ್ಕೆ ತುತ್ತಾಗಿದ್ದ ವೆಂಕಟ್ ಅವರು ಚಿತ್ರೋಧ್ಯಮದಿಂದ ಹಣಕಾಸಿನ ಸಹಾಯ ನಿರೀಕ್ಷಿಸಿದ್ದರು. ಆದರೆ, ಅವರಿಗೆ ಸಹಾಯ ಸಿಗಲಿಲ್ಲ ಎಂಬ ಆರೋಪಗಳೂ ಕೇಳಿ ಬಂದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.