ADVERTISEMENT

ತೆಲುಗು ಹಿರಿಯ ನಟ ಕೋಟಾ ಶ್ರೀನಿವಾಸ ರಾವ್ ನಿಧನ

ಏಜೆನ್ಸೀಸ್
Published 13 ಜುಲೈ 2025, 1:59 IST
Last Updated 13 ಜುಲೈ 2025, 1:59 IST
   

ಹೈದರಾಬಾದ್‌: ತೆಲುಗು ಚಿತ್ರರಂಗದ ಹಿರಿಯ ನಟ ಕೋಟಾ ಶ್ರೀನಿವಾಸ ರಾವ್ (83) ಅವರು ಇಂದು (ಭಾನುವಾರ) ಮುಂಜಾನೆ 4 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಕೋಟಾ ಶ್ರೀನಿವಾಸ ರಾವ್ ಅವರು ಹಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕೋಟಾ ಶ್ರೀನಿವಾಸ ರಾವ್ ಅವರು ದಕ್ಷಿಣ ಭಾರತದ ಅಗ್ರಗಣ್ಯ ನಟರಲ್ಲಿ ಒಬ್ಬರಾಗಿದ್ದರು. ನಾಲ್ಕು ದಶಕಗಳಿಗೂ ಹೆಚ್ಚು ಕಾಲದ ವೃತ್ತಿಜೀವನದಲ್ಲಿ 750ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಹಾಸ್ಯ, ಖಳನಾಯಕ, ಪೋಷಕ ಪಾತ್ರಗಳ ಮೂಲಕ ಗಮನ ಸೆಳೆದಿದ್ದಾರೆ.

ADVERTISEMENT

ಕೋಟಾ ಶ್ರೀನಿವಾಸ ರಾವ್ ಅವರು ಪದ್ಮಶ್ರೀ ಸೇರಿದಂತೆ ಹಲವು ಬಾರಿ ನಂದಿ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಒಮ್ಮೆ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ರಾವ್ ನಿಧನಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿದಂತೆ ತೆಲುಗು ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಂಬನಿ ಮಿಡಿದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.