ಕಾಲಿವುಡ್‌ನ ಸ್ಟಾರ್ ನಟ ದಳಪತಿ ವಿಜಯ್ ಈಗ ಸಿನಿಮಾಗಿಂತಲೂ ರಾಜಕೀಯದ ಕಡೆ ಹೆಚ್ಚಾಗಿ ಗಮನ ಹರಿಸುತ್ತಿದ್ದಾರೆ. ತಮ್ಮದೇ ಹೊಸ ಪಕ್ಷ ಸ್ಥಾಪಿಸಿಕೊಂಡು ರಾಜಕೀಯಕ್ಕೆ ಧುಮುಕಿದ್ದಾರೆ. ಹೀಗಾಗಿ ಚಿತ್ರರಂಗಕ್ಕೆ ಗುಡ್ ಬೈ ಹೇಳಿದ್ದು, ಅವರ ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ.
ಹೌದು, ಜನವರಿ 15, 2026 ತಮಿಳುನಾಡಿನಲ್ಲಿ ಪೊಂಗಲ್ ಸಂಭ್ರಮದ ದಿನ. ಅದೇ ದಿನ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ದೊಡ್ಡ ಬಜೆಟ್ ಸಿನಿಮಾ ‘ಜನ ನಾಯಗನ್’ ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ಹಲವು ವಿಶೇಷತೆಗಳಿವೆ. ಇದು ದಳಪತಿ ವಿಜಯ್ ಅಭಿನಯದ 69ನೇ ಸಿನಿಮಾ ಮತ್ತು ಸಿನಿ ಬದುಕಿನಿಂದ ನಿವೃತ್ತಿ ಪಡೆದು ಪೂರ್ಣಪ್ರಮಾಣದಲ್ಲಿ ರಾಜಕಾರಣಿಯಾಗಲು ಹೊರಟಿರುವ ವಿಜಯ್ ಅವರ ಕೊನೆಯ ಸಿನಿಮಾ.
ಕೆವಿಎನ್ ಪ್ರೊಡಕ್ಷನ್ಸ್ ದಕ್ಷಿಣ ಭಾರತದ ಚಿತ್ರೋದ್ಯಮದಲ್ಲಿ ಮೈಲಿಗಲ್ಲನ್ನೇ ಸ್ಥಾಪಿಸಿದೆ. ಸ್ಯಾಂಡಲ್‌ವುಡ್ ಸೇರಿದಂತೆ ಬಾಲಿವುಡ್, ಟಾಲಿವುಡ್ ಹಾಗೂ ಕಾಲಿವುಡ್ ಸಿನಿಮಾಗಳನ್ನು ನಿರ್ಮಿಸುತ್ತಿದೆ. ಸಿನಿಮಾ ಅದ್ದೂರಿಯಾಗಿ ಮೂಡಿ ಬರಬೇಕು ಎನ್ನುವುದು ಕೆವಿಎನ್ ಪ್ರೊಡಕ್ಷನ್ಸ್ ಆಶಯ. ಹಣ ಕೊಟ್ಟು ಸಿನಿಮಾ ನೋಡುವ ಪ್ರೇಕ್ಷಕರಿಗೆ ಮೋಸವಾಗಬಾರದು ಎಂಬುದು ಸಂಸ್ಥೆಯ ಆಶಯ. ಸಿನಿಮಾ ನೋಡಿ ಎದ್ದು
ಹೊರಬರುವ ಪ್ರೇಕ್ಷಕರ ಮನದಲ್ಲಿ ಮತ್ತೊಮ್ಮೆ ಸಿನಿಮಾ ನೋಡಬೇಕು ಎನ್ನಿಸುವಂತೆ ಚಿತ್ರ ನಿರ್ಮಿಸುವ ಗುರಿ ಕೆವಿಎನ್ ಸಂಸ್ಥೆಯದ್ದು.
ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆಯ ಮುಖ್ಯಸ್ಥ ವೆಂಕಟ್ ಕೆ. ನಾರಾಯಣ ಎಲ್ಲಾ ಭಾಷೆಗಳಲ್ಲಿ ದೊಡ್ಡ ಸ್ಟಾರ್‌ಗಳ ಜೊತೆಗೆ ದೊಡ್ಡ ಬಜೆಟ್‌ನ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಕೆವಿಎನ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ‘ಜನ ನಾಯಗನ್’ ಸಿನಿಮಾ ಚಿತ್ರೀಕರಣ ಭರದಿಂದ ಸಾಗಿದೆ.
ಈ ಚಿತ್ರದ ಆಗಮನಕ್ಕಾಗಿ ದಳಪತಿ ವಿಜಯ್ ಅಭಿಮಾನಿಗಳಷ್ಟೆ ಅಲ್ಲ, ಇಡೀ ದಕ್ಷಿಣ ಭಾರತ ಕಾಯುತ್ತಿದೆ. ಈ ಸಿನಿಮಾಗೆ ಬಂಡವಾಳ ಹಾಕಿರುವ ಕೆವಿಎನ್ ಪ್ರೊಡಕ್ಷನ್ಸ್ ಯಾವುದಕ್ಕೂ ಕೊರತೆ ಇಲ್ಲದಂತೆ ಚಿತ್ರ ನಿರ್ಮಾಣ ಮಾಡುತ್ತಿದೆ. ಸಂಸ್ಥೆ ಯಾವುದೇ ಸಿನಿಮಾ ಮಾಡಲಿ, ನಿರ್ಮಾಣದಲ್ಲಿ ಸಣ್ಣದೊಂದು ಲೋಪವೂ ಕಾಣಿಸುವುದಿಲ್ಲ!.
ಎಚ್. ವಿನೋತ್ ನಿರ್ದೇಶಿಸಿ, ಅನಿರುದ್ಧ್ ರವಿಚಂದರ್ ಸಂಗೀತ ನೀಡಿರುವ ಸಿನಿಮಾ, ದಳಪತಿ ವಿಜಯ್ ಅವರ ಕೋಟ್ಯಂತರ ಅಭಿಮಾನಿಗಳ ಹೃದಯ ಗೆಲ್ಲುವುದರಲ್ಲಿ ಅನುಮಾನವಿಲ್ಲ. ‘ಜನ ನಾಯಗನ್’ ನೋಡಲು ಜನ ಕೂಡ ಕಾತರದಿಂದ ಕಾಯುತ್ತಿದ್ದಾರೆ.
ಕೆವಿಎನ್ ಪ್ರೊಡಕ್ಷನ್ಸ್ ಹಲವಾರು ದೊಡ್ಡ ಸಿನಿಮಾಗಳೊಂದಿಗೆ ವಿತರಣೆಯಲ್ಲೂ ಒಳ್ಳೆಯ ಹೆಸರು ಮಾಡಿದೆ. ಇನ್ನು ನಿರ್ಮಾಣದ ವಿಚಾರಕ್ಕೆ ಬಂದರೆ, ದೊಡ್ಡ ಸ್ಟಾರ್‌ಗಳ ದೊಡ್ಡ ಬಜೆಟ್ ಸಿನಿಮಾ ನಿರ್ಮಾಣದ ಮೂಲಕ ದೇಶದಾದ್ಯಂತ ಹೆಸರು ಮಾಡಿದೆ.
ಪ್ರಸ್ತುತಿ: ಪಿ.ವಿ. ಬ್ರ್ಯಾಂಡ್ ಸ್ಪಾಟ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.