‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ನಿರ್ದೇಶನ ಮಾಡಿದ್ದ ವಿವೇಕ್ ಅಗ್ನಿಹೋತ್ರಿ ಅವರು ಹೊಸ ಸಿನಿಮಾ ಮಾಡುವುದಾಗಿ ಹೇಳಿದ್ದಾರೆ.
ವಿವೇಕ್ ಅವರು ನೂತನ ಸಿನಿಮಾಗೆ ‘ದಿ ದಿಲ್ಲಿ ಫೈಲ್ಸ್’ ಎಂದು ಹೆಸರಿಟ್ಟಿದ್ದಾರೆ. ಈ ಸಿನಿಮಾವನ್ನು ನಿರ್ದೇಶನ ಮಾಡುವುದಾಗಿ ಅವರು ಕಳೆದ ವರ್ಷವೇ ಪ್ರಕಟಿಸಿದ್ದರು. ಈಗ ‘ದಿ ದಿಲ್ಲಿ ಫೈಲ್ಸ್’ ಚಿತ್ರವನ್ನು ಕೈಗೆತ್ತಿಕೊಳ್ಳುವುದಾಗಿ ಹೇಳಿದ್ದಾರೆ.
‘ದಿ ಕಾಶ್ಮೀರ್ ಫೈಲ್ಸ್’ ಗೆಲುವಿನ ಮೂಲಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಜನಪ್ರಿಯತೆ ಸಿಕ್ಕಿದೆ. ಈಗಾಗಲೇ ಈ ಸಿನಿಮಾ ₹100 ಕೋಟಿ ಕ್ಲಬ್ ಸೇರಿದೆ. ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆಯನ್ನು ಆಧರಿಸಿ ನಿರ್ಮಾಣ ಮಾಡಿರುವ ಈ ಸಿನಿಮಾವನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು,ರಾಜಕೀಯ ನಾಯಕರು ಮತ್ತುಸಾರ್ವಜನಿಕರು ಸಿನಿಮಾ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ.
ಸಿನಿಮಾದ ಬಗ್ಗೆ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ. ರಾಜಕಾರಣಿಗಳು ಸೇರಿದಂತೆ ಕೆಲವರು ಸಿನಿಮಾವನ್ನು ಮೆಚ್ಚಿದರೆ ಮತ್ತೆ ಹಲವರು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ.
ವಿವೇಕ್ ಅವರ ‘ದಿ ತಾಷ್ಕೆಂಟ್ ಫೈಲ್ಸ್’ ಸಿನಿಮಾ 2019ರಲ್ಲಿ ಬಿಡುಗಡೆಯಾಗಿತ್ತು. ಈ ಸಿನಿಮಾಗೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ಇದೀಗ ‘ದಿ ದಿಲ್ಲಿ ಫೈಲ್ಸ್’ ಚಿತ್ರದ ಬಗ್ಗೆ ಸಿನಿಮಾ ಪ್ರಿಯರಲ್ಲಿ ಕುತೂಹಲ ಹೆಚ್ಚಾಗಿದೆ. ಈ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.