
ನಟ ದರ್ಶನ್
ನಟ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ದಿ ಡೆವಿಲ್’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಇಂದು ಬೆಳಗ್ಗೆ 10.05ಕ್ಕೆ ದಿ ಡೆವಿಲ್ ಸಿನಿಮಾದ ಟ್ರೇಲರ್ ಸರೆಗಮ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಮಾಡಲಾಗಿದೆ.
ನಟ ದರ್ಶನ್ ಅವರು ಟ್ರೇಲರ್ ಆರಂಭದಲ್ಲೆ ‘ಅವಲಕ್ಕಿ ಪವಲಕ್ಕಿ ಕಾಂಚಣ ಮಿಣಮಿಣ‘ ಎಂದು ಹೇಳುವುದರ ಮೂಲಕ ಆರಂಭವಾಗುತ್ತದೆ. ದರ್ಶನ್ ಅವರು ಟ್ರೇಲರ್‌ನಲ್ಲಿ ಹಲವು ಗೆಟಪ್ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸ್ಟೈಲಿಶ್ ಲುಕ್, ಮಾಸ್ ಡೈಲಾಗ್ ಗಮನ ಸೆಳೆಯುವಂತಿದೆ. ‘ಸೂರ್ಯಂಗೆ ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನು ಬರ್ತಿದೀನಿ ಚಿನ್ನ’ ಎಂದು ದರ್ಶನ್ ಡೈಲಾಗ್ ಹೇಳುವಾಗ ರಿಲೀಸ್ ದಿನಾಂಕ ತೋರಿಸಲಾಗುತ್ತದೆ. ವಿನಯ್ ಗೌಡ, ಅಚ್ಯುತ್ ಕುಮಾರ್ ಹಾಗೂ ಗಿಲ್ಲಿ ನಟ ಮೊದಲಾದವರನ್ನು ಟ್ರೇಲರ್‌ನಲ್ಲಿ ತೋರಿಸಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಜೈಲಿನಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ದರ್ಶನ್ ಅಭಿಮಾನಿಗಳು ‘ದಿ ಡೆವಿಲ್’ ಸಿನಿಮಾದ ಮೂಲಕ ದರ್ಶನ್ ನೋಡಲು ಕಾದು ಕುಳಿತಿದ್ದಾರೆ. ಇದೀಗ ಟ್ರೇಲರ್ ಬಿಡುಗಡೆಯಾಗಿದ್ದು, ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.
ಇತ್ತೀಚೆಗೆ ನಿರ್ದೇಶಕ ಮಿಲನಾ ಪ್ರಕಾಶ್ ಅವರು ಹೇಳಿದಂತೆ ನಟ ದರ್ಶನ್ ವಿಭಿನ್ನ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ದಿ ಡೆವಿಲ್ ಸಿನಿಮಾದಲ್ಲಿ ರೆಬೆಲ್ ಆಗಿ ನಟಿಸಿದ್ದನ್ನು ಟ್ರೇಲರ್‌ನಲ್ಲಿ ಕಾಣಬಹುದು. ದಿ ಡೆವಿಲ್ ಸಿನಿಮಾ ಇದೇ ಡಿಸೆಂಬರ್ 11ರಂದು ಬಿಡುಗಡೆಯಾಗಲಿದೆ. ಮಿಲನಾ ಪ್ರಕಾಶ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ದರ್ಶನ್, ರಚನಾ ರೈ, ಶರ್ಮಿಳಾ ಮಾಂಡ್ರೆ ಮುಂತಾದವರು ನಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.