ADVERTISEMENT

ಕತ್ರಿನಾ ಗರ್ಭಿಣಿ ಎಂದ ಅಭಿಮಾನಿಗಳು: ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡ ಫೋಟೊ ವೈರಲ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಏಪ್ರಿಲ್ 2022, 7:35 IST
Last Updated 13 ಏಪ್ರಿಲ್ 2022, 7:35 IST
ಕತ್ರಿನಾ ಕೈಫ್
ಕತ್ರಿನಾ ಕೈಫ್   

ಮುಂಬೈ: ಬಾಲಿವುಡ್‌ ನಟಿ ಕತ್ರಿನಾ ಕೈಫ್ ಗರ್ಭಿಣಿ ಆಗಿದ್ದಾರೆಯೇ... ಈ ಕುರಿತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆರಂಭಿಸಿದ್ದಾರೆ.

ಕತ್ರಿನಾ, ಇತ್ತೀಚೆಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಪೀಚ್ ಬಣ್ಣದ ಸಡಿಲವಾದ ಕುರ್ತಾ ಮತ್ತು ಪ್ಯಾಂಟ್ ಧರಿಸಿದ್ದರು.

ಕತ್ರಿನಾ ಅವರ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಕೂಡಲೇ ತಮ್ಮ ನೆಚ್ಚಿನ ನಟಿ ಗರ್ಭಿಣಿ ಆಗಿದ್ದಾರೆ ಎಂದು ಅಭಿಮಾನಿಗಳು ಊಹಿಸಲು ಪ್ರಾರಂಭಿಸಿದ್ದಾರೆ.

ADVERTISEMENT

‘ಕತ್ರಿನಾ ಗರ್ಭಿಣೆ ಆಗಿರುವಂತೆ ಕಾಣಿಸುತ್ತಿದ್ದಾರೆ’, ‘ಕತ್ರಿನಾ ಗರ್ಭಿಣಿಯಾಗಿರಬಹುದು ಎಂದು ನಾನು ಭಾವಿಸುತ್ತೇನೆ’, ‘ಆಕೆ ಗರ್ಭಿಣಿ’ ಎಂದು ಹಲವು ಬಗೆಯಲ್ಲಿ ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ.

2021ರ ಡಿ. 9ರಂದು ರಾಜಸ್ಥಾನದ ಸವಾಯಿ ಮಾಧೋಪುರದಲ್ಲಿ ವಿಕ್ಕಿ ಕೌಶಲ್‌ ಮತ್ತು ಕತ್ರಿನಾ ಕೈಫ್ ಅದ್ಧೂರಿಯಾಗಿ ವಿವಾಹವಾಗಿದ್ದರು.

ಫರ್ಹಾನ್ ಆ್ಯಕ್ಷನ್ ಕಟ್‌ ಹೇಳುತ್ತಿರುವ ‘ಜೀ ಲೆ ಜರಾ’ ಚಿತ್ರದಲ್ಲಿ ಕತ್ರಿನಾ ಕೈಫ್ ನಟಿಸುತ್ತಿದ್ದಾರೆ. ಸಲ್ಮಾನ್ ಖಾನ್ ಅಭಿನಯದ ‘ಟೈಗರ್ 3’ ಚಿತ್ರದಲ್ಲೂ ಕಾಣಿಸಿಕೊಳ್ಳಲಿದ್ದಾರೆ.

ಲಕ್ಷ್ಮಣ್ ಉಟೇಕರ್ ನಿರ್ದೇಶನದ ಹೆಸರಿಡದ ಚಿತ್ರದಲ್ಲಿ ವಿಕ್ಕಿ ಕೌಶಲ್‌, ಸಾರಾ ಅಲಿ ಖಾನ್‌ ಅಭಿನಯಿಸುತ್ತಿದ್ದು, ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.