ADVERTISEMENT

ದಿ ರೈಸ್ ಆಫ್ ಅಶೋಕ ಸಿನಿಮಾದ ‘ಕಲ್ಯಾಣವೇ ಗೌರಿ’ ಹಾಡು ಬಿಡುಗಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜನವರಿ 2026, 9:22 IST
Last Updated 21 ಜನವರಿ 2026, 9:22 IST
<div class="paragraphs"><p><strong>ಸಪ್ತಮಿ ಗೌಡ,</strong>&nbsp;<strong>ಸತೀಶ್ ನೀನಾಸಂ</strong></p></div>

ಸಪ್ತಮಿ ಗೌಡ, ಸತೀಶ್ ನೀನಾಸಂ

   

ಚಿತ್ರ: ಯ್ಯೂಟೂಬ್

ಸತೀಶ್ ನೀನಾಸಂ ಹಾಗೂ ಸಪ್ತಮಿ ಗೌಡ ನಟನೆಯ ‘ದಿ ರೈಸ್ ಆಫ್ ಅಶೋಕ’ ಸಿನಿಮಾದ ‘ಕಲ್ಯಾಣವೇ ಗೌರಿ’ ಹಾಡು ಇಂದು (ಬುಧವಾರ) ಬಿಡುಗಡೆಯಾಗಿದೆ. ಈ ಕುರಿತು ನಟಿ ಸಪ್ತಮಿ ಗೌಡ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ.

ADVERTISEMENT

ಮದುವೆಯ ಸಂಭ್ರಮದ ಸವಿಗಾನ ‘ಕಲ್ಯಾಣವೇ ಗೌರಿ’ ಹಾಡು ಲಹರಿ ಮ್ಯೂಸಿಕ್ ಯ್ಯೂಟೂಬ್ ಚಾನೆಲ್‌ನಲ್ಲಿ ಮಧ್ಯಾಹ್ನ 12.06ಕ್ಕೆ ಬಿಡುಗಡೆ ಮಾಡಲಾಗಿದೆ. ಹಾಡಿನ ವಿಡಿಯೊ ತುಣುಕುಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಈ ಸಿನಿಮಾವು ವ್ಯಾಪಾರಿ ಮತ್ತು ಕೆಲಸಗಾರರ ನಡುವಿನ ಕಥೆಯನ್ನು ಒಳಗೊಂಡಿದೆ. ರೆಟ್ರೊ ಶೈಲಿಯ ಕಥೆಯಾಗಿದ್ದು, ಇದು ರೌಡಿಸಂ ಕಥೆಯಲ್ಲ. ಕ್ರಾಂತಿಕಾರಿ ಅಶೋಕನ ಕಥೆ. ವ್ಯಾಪಾರಿಗಳು ಕೂಲಿ ಕೆಲಸಗಾರರ ಮೇಲೆ ದಬ್ಬಾಳಿಕೆ ಮಾಡುವುದು ಬಹಳ ಕಾಲದಿಂದ ನಡೆದುಕೊಂಡು ಬಂದಿದೆ. ಅದರ ವಿರುದ್ಧ ಪ್ರತಿಭಟಿಸಿ ಬಂಡೇಳುವ ನಾಯಕನ ಕಥೆ ಇದಾಗಿದೆ. 

ಈ ಚಿತ್ರವನ್ನು ಮನು ಶೆಡ್ಡಾರ್ ಅವರು ನಿರ್ದೇಶನ ಮಾಡುತ್ತಿದ್ದು, ಛಾಯಾಚಿತ್ರಗ್ರಹಣ ಲವಿತ್, ವೃದ್ಧಿ ಕ್ರಿಯೇಷನ್ಸ್‌ ಜೊತೆಗೆ ಸತೀಶ್ ನೀನಾಸಂ ಕೂಡ ನಿರ್ಮಾಣದಲ್ಲಿ ಕೈಜೋಡಿಸಿದ್ದಾರೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.