
ಸತೀಶ್ ನೀನಾಸಂ ನಟನೆಯ ‘ದಿ ರೈಸ್ ಆಫ್ ಅಶೋಕ’ ಚಿತ್ರದ ಟ್ರೇಲರ್ ಇಂದು (ಬುಧವಾರ) ಬಿಡುಗಡೆಯಾಗಲಿದೆ.
‘ದಿ ರೈಸ್ ಆಫ್ ಅಶೋಕ’ ಚಿತ್ರದ ಟ್ರೇಲರ್ ಅನ್ನು ಚಂದನವನದ ತಾರೆಯರಾದ ನಟ ರವಿಚಂದ್ರನ್, ದುನಿಯಾ ವಿಜಯ್, ಪ್ರಜ್ವಲ್ ದೇವರಾಜ್, ಡಾಲಿ ಧನಂಜಯ್, ಯೋಗೆಶ್, ದಿಗಂತ್, ಡಾರ್ಲಿಂಗ್ ಕೃಷ್ಣಾ, ವಸಿಷ್ಠ ಸಿಂಹ, ನಾಗಭೂಷಣ್, ಶಿವರಾಜ್ ಕೆ.ಆರ್.ಪೇಟೆ ಅವರು ಟ್ರೇಲರ್ ಬಿಡುಗಡೆ ಮಾಡಲಿದ್ದಾರೆ ಎಂದು ಚಿತ್ರತಂಡ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದೆ.
‘ದಿ ರೈಸ್ ಆಫ್ ಅಶೋಕ’ ಚಿತ್ರದ ಟ್ರೇಲರ್ ಇಂದು (ಬುಧವಾರ) ಸಂಜೆ 6 ಗಂಟೆಗೆ ಕನ್ನಡ, ತಮಿಳು, ತೆಲುಗು ಭಾಷೆಯಲ್ಲಿ ಅನಾವರಣಗೊಳ್ಳಲಿದೆ. ಮನು ಶೆಡ್ಡಾರ್ ನಿರ್ದೇಶನದ ಈ ಚಿತ್ರವನ್ನು ವೃದ್ಧಿ ಕ್ರಿಯೇಷನ್ಸ್ ಜೊತೆಗೆ ಸತೀಶ್ ನೀನಾಸಂ ಕೂಡ ನಿರ್ಮಾಣದಲ್ಲಿ ಕೈಜೋಡಿಸಿದ್ದಾರೆ.
ಈ ಚಿತ್ರದ ‘ಸಿದ್ದಯ್ಯ ಸ್ವಾಮಿ', ‘ಕಲ್ಯಾಣವೇ ಗೌರಿ’, ‘ಏಳೋ ಏಳೋ ಮಾದೇವʼ ಹಾಡುಗಳು ಬಿಡುಗಡೆಯಾಗಿ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.