ಕಾಲೇಜು ಕ್ಯಾಂಪಸ್‌ನಲ್ಲಿ ನಡೆಯುವ ಪ್ರೇಮಕಥೆಯನ್ನು ಹೊಂದಿರುವ ಚಿತ್ರ ‘ಕಾಲೇಜ್ ಕಲಾವಿದ’. ಬಿಡುಗಡೆಗೆ ಸಿದ್ಧವಿರುವ ಈ ಚಿತ್ರದ ಹಾಡುಗಳು ಇತ್ತೀಚೆಗಷ್ಟೇ ಬಿಡುಗಡೆಗೊಂಡಿವೆ. ಸಂಜಯ್ ಮಳವಳ್ಳಿ ಈ ಚಿತ್ರಕ್ಕೆ ಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ.
ನಟ ರಮೇಶ್ ಅರವಿಂದ್ ‘ಸಿಂಗಾರ ನೀನೆ’ ಹಾಡು ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ಚಿತ್ರತಂಡ ‘ಹೊಂಟಾಯ್ತು ಹಮ್ಮೀರಾ’ ಎಂಬ ಮತ್ತೊಂದು ಹಾಡನ್ನು ಬೈಕ್ ವ್ಲಾಗರ್‌ಗಳಿಂದ ಬಿಡುಗಡೆ ಮಾಡಿಸಿದೆ.
‘ಸಿನಿಮಾ ರಂಗದಲ್ಲಿ ಸುಮಾರು ವರ್ಷಗಳಿಂದ ಕೆಲಸ ಮಾಡಿಕೊಂಡು ಬಂದಿರುವೆ. ಹಲವಾರು ಸಿನಿಮಾಗಳಲ್ಲಿ ಬರಹಗಾರನಾಗಿ, ಸಹ ನಿರ್ದೇಶಕನಾಗಿ ಕೆಲಸ ಮಾಡಿರುವೆ. ಪ್ರೇಮ ಕಥೆಯೊಂದಿಗೆ ಕಾಲೇಜು ದಿನಗಳ ಸುಂದರ ಅನುಭವ ಕಟ್ಟಿಕೊಡುವ ಚಿತ್ರವಿದು. ಚಿತ್ರೀಕರಣ ಮುಗಿದು ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ’ ಎಂದು ಮಾಹಿತಿ ನೀಡಿದರು ನಿರ್ದೇಶಕರು.
ಗಜಾನನ ಫಿಲ್ಮ್ಸ್ ಬ್ಯಾನರ್‌ನಲ್ಲಿ ತರುಣ್ ಶರ್ಮಾ ನಿರ್ಮಾಣ ಮಾಡಿದ್ದಾರೆ. ಸಾಕಷ್ಟು ಧಾರಾವಾಹಿಗಳಲ್ಲಿ ನಟಿಸರುವ ಆರವ್ ಸೂರ್ಯ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಅವರಿಗೆ ಚೈತ್ರ ಲೋಕನಾಥ್ ಜೋಡಿಯಾಗಿದ್ದಾರೆ. ಹುಲಿ ಕಾರ್ತಿಕ್, ಹರಿಣಿ ಶ್ರೀಕಾಂತ್, ರಮೇಶ್ ಭಟ್ ಮುಂತಾದವರು ಚಿತ್ರದಲ್ಲಿದ್ದಾರೆ.
ಸುರಾಜ್ ಜೋಯಿಸ್ ಸಂಗೀತ, ಆನಂದ್ ಸುಂದರೇಶ ಛಾಯಾಚಿತ್ರಗ್ರಹಣ, ಮಹೇಶ್ ಗಂಗಾವತಿ ಸಂಕಲನವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.