ADVERTISEMENT

ಡಿಕೆಶಿ ಸಾಹೇಬ್ರು ಹೇಳುವುದರಲ್ಲಿ ತಪ್ಪೇನಿಲ್ಲ: ನಟಿ ರಮ್ಯಾ

ಕಲಾವಿದರಿಗೆ ಡಿಕೆಶಿ ಎಚ್ಚರಿಕೆ: ನಟಿ ರಮ್ಯಾ ಸಮರ್ಥನೆ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2025, 1:35 IST
Last Updated 3 ಮಾರ್ಚ್ 2025, 1:35 IST
ರಮ್ಯಾ
ರಮ್ಯಾ   

ಹೊಸಪೇಟೆ (ವಿಜಯನಗರ): ನೆಲ, ಜಲ, ಭಾಷೆ ವಿಚಾರದಲ್ಲಿ ಕಲಾವಿದರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದನ್ನು ನಟಿ ಹಾಗೂ ಕಾಂಗ್ರೆಸ್ ನಾಯಕಿ ರಮ್ಯಾ ಸಮರ್ಥಿಸಿಕೊಂಡಿದ್ದಾರೆ.

ಹಂಪಿ ಉತ್ಸವದ ಸಮಾರೋಪ ಸಮಾರಂಭದಲ್ಲಿ ಭಾನುವಾರ ಭಾಗವಹಿಸುವುದಕ್ಕೂ ಮುನ್ನ ಹಂಪಿಯಲ್ಲಿ ಮಾಧ್ಯಮದವರೊಂಗೆ ಮಾತನಾಡಿದ ಅವರು, ‘ಸಾಹೇಬ್ರು ಹೇಳುವುದರಲ್ಲಿ ತಪ್ಪೇನಿಲ್ಲ, ನೀರಿನ ವಿಚಾರ ಬಂದಾಗ ಕಲಾವಿದರೆಲ್ಲರೂ ಬೆಂಬಲಿಸಬೇಕು. ಡಾ‌.ರಾಜ್‌ಕುಮಾರ್‌ ಅವರು, ನೆಲ, ಜಲ ಭಾಷೆ ವಿಚಾರದಲ್ಲಿ ಹೋರಾಟ ಮಾಡಿದ್ದಾರೆ’ ಎಂದರು.

‘ಉತ್ತರ ಕರ್ನಾಟಕದ ನದಿಗಳು, ಜಲಾಶಯಗಳ ಬಗ್ಗೆಯೂ ಕಲಾವಿದರು ಮಾತನಾಡಬೇಕು’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.