ADVERTISEMENT

ಬಾಲಿವುಡ್‌ನ ಹಿರಿಯ ನಟಿ ಸುರೇಖಾ ಸಿಕ್ರಿ ಹೃದಯಾಘಾತದಿಂದ ನಿಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಜುಲೈ 2021, 5:43 IST
Last Updated 16 ಜುಲೈ 2021, 5:43 IST
ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ನಟಿ ಸುರೇಖಾ ಸಿಕ್ರಿ ಅವರಿಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದ ಕ್ಷಣ
ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ನಟಿ ಸುರೇಖಾ ಸಿಕ್ರಿ ಅವರಿಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದ ಕ್ಷಣ   

ಮುಂಬೈ: ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಸುರೇಖಾ ಸಿಕ್ರಿ(75) ಅವರು ಶುಕ್ರವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕಳೆದ ಕೆಲ ತಿಂಗಳುಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಸುರೇಖಾ ಮೆದುಳಿನ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

'ಸುರೇಖಾ ಸಿಕ್ರಿ ಇಂದು(ಶುಕ್ರವಾರ) ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಅವರು ಮೆದುಳಿನ ಕಾಯಿಲೆಯಿಂದ ಬಳಲುತ್ತಿದ್ದರು' ಎಂದು ಮ್ಯಾನೇಜರ್‌ ಓಂ ಸಾಯಿ ರಾಮ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ADVERTISEMENT

1978 ರಲ್ಲಿ ಬಿಡುಗಡೆಯಾದ ಕಿಸ್ಸಾ ಕುರ್ಸಿ ಕಾ ಚಿತ್ರದ ಮೂಲಕ ಸುರೇಖಾ ಹಿಂದಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ತಮಸ್ (1988), ಮಮ್ಮೊ (1995) ಮತ್ತು ಬಧಾಯಿ ಹೋ (2018) ಚಿತ್ರಗಳಲ್ಲಿನ ಪಾತ್ರಗಳಿಗಾಗಿ ಅವರು ಮೂರು ಬಾರಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.