ನಟ ಕಮಲ್ ಹಾಸನ್ ನಟನೆಯ 234ನೇ ಸಿನಿಮಾ ‘ಥಗ್ ಲೈಫ್’ ಜೂನ್ 5ರಂದು ತೆರೆಕಾಣಲಿದ್ದು, ಇತ್ತೀಚೆಗೆ ಚಿತ್ರದ ಮೊದಲ ಹಾಡು ಚೆನ್ನೈನಲ್ಲಿ ಬಿಡುಗಡೆಗೊಂಡಿತು.
ಈ ಸಿನಿಮಾವನ್ನು ಮಣಿರತ್ನಂ ನಿರ್ದೇಶಿಸಿದ್ದಾರೆ. 1987ರಲ್ಲಿ ಬಿಡುಗಡೆಗೊಂಡ ‘ನಾಯಗನ್’ನಲ್ಲಿ ಕಮಲ್ ಹಾಸನ್‌ಗೆ ಮಣಿರತ್ನಂ ಆ್ಯಕ್ಷನ್ ಕಟ್ ಹೇಳಿದ್ದರು. ಇದೀಗ 35 ವರ್ಷಗಳ ಬಳಿಕ ಇವರ ಕಾಂಬಿನೇಷನ್‌ನಲ್ಲಿ ಸಿನಿಮಾ ತೆರೆಗೆ ಬರುತ್ತಿದೆ. ಈ ಹಾಡಿನಲ್ಲಿ ಕಮಲ್ ಹಾಗೂ ಸಿಂಬು ಇದ್ದಾರೆ. ಹಾಡನ್ನು ಮದುವೆ ಸಮಾರಂಭದ ಸಂದರ್ಭದಲ್ಲಿ ಚಿತ್ರೀಕರಿಸಲಾಗಿದೆ. ವಿಶೇಷವೆಂದರೆ ಈ ಹಾಡಿಗೆ ಕಮಲ್ ಹಾಸನ್ ಸಾಹಿತ್ಯ ಬರೆದಿದ್ದು, ಎ.ಆರ್.ರೆಹಮಾನ್ ಸಂಗೀತ ನೀಡಿದ್ದಾರೆ. ರಾಜ್ ಕಮಲ್ ಫಿಲ್ಮ್ಸ್ ಇಂಟರ್‌ನ್ಯಾಷನಲ್, ಆರ್. ಮಹೇಂದ್ರನ್, ಮದ್ರಾಸ್ ಟಾಕೀಸ್ ಮತ್ತು ಶಿವ ಅನಂತ್ ನಿರ್ಮಾಣದಲ್ಲಿ ಈ ಸಿನಿಮಾ ತಯಾರಾಗಿದೆ.
ತ್ರಿಷಾ, ಅಶೋಕ್ ಸೆಲ್ವನ್, ಐಶ್ವರ್ಯ ಲಕ್ಷ್ಮಿ, ಜೋಜು ಜಾರ್ಜ್, ಅಭಿರಾಮಿ ಮತ್ತು ನಾಸರ್, ಮತ್ತಿತರರು ಚಿತ್ರದ ತಾರಾಬಳಗದಲ್ಲಿದ್ದಾರೆ. ಕಥೆ, ಚಿತ್ರಕಥೆಯನ್ನು ಮಣಿರತ್ನಂ ಮತ್ತು ಕಮಲ್ ಹಾಸನ್ ಬರೆದಿದ್ದು, ರವಿ ಆರ್. ಚಂದ್ರನ್ ಛಾಯಾಚಿತ್ರಗ್ರಹಣ, ಅನ್ಬರಿವ್ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಈಗಾಗಲೇ ನೆಟ್‌ಫ್ಲಿಕ್ಸ್ ‘ಥಗ್ ಲೈಫ್’ ಒಟಿಟಿ ಹಕ್ಕು ಪಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.