ADVERTISEMENT

‘ಥಗ್‌ ಲೈಫ್‌’ ಬಿಡುಗಡೆ: ಕನ್ನಡಪರ ಸಂಘಟನೆಗಳ ನಾಯಕರಿಗೆ ಮುನ್ನೆಚ್ಚರಿಕೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 19 ಜೂನ್ 2025, 0:47 IST
Last Updated 19 ಜೂನ್ 2025, 0:47 IST
ಥಗ್‌ ಲೈಫ್‌ ಪೋಸ್ಟರ್‌ 
ಥಗ್‌ ಲೈಫ್‌ ಪೋಸ್ಟರ್‌    

ಬೆಂಗಳೂರು: ತಮಿಳುನಟ ಕಮಲ್ ಹಾಸನ್ ಅವರ ‘ಥಗ್‌ ಲೈಫ್‌’ ಚಲನಚಿತ್ರ ಬಿಡುಗಡೆ ಪ್ರಯುಕ್ತ ಮುನ್ನೆಚ್ಚರಿಕೆ ಕ್ರಮವಾಗಿ ಕನ್ನಡಪರ ಸಂಘಟನೆಗಳ ನಾಯಕರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಸುಪ್ರೀಂ ಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ಥಗ್‌ ಲೈಫ್ ಬಿಡುಗಡೆಗೆ ಸಿದ್ಧತೆಗಳು ನಡೆದಿವೆ. ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂಬ ಕಾರಣಕ್ಕಾಗಿ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.

‘ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಹೋರಾಟಕ್ಕೆ ಅವಕಾಶವಿದೆ. ಅದಕ್ಕೆ ಹೊರತಾಗಿ ಬೇರೆ ರೀತಿಯ ಪ್ರತಿಭಟನೆಗಳಿಗೆ ಅವಕಾಶ ಇಲ್ಲ. ಕೋರ್ಟ್‌ ಆದೇಶ ಉಲ್ಲಂಘಿಸಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು’ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ADVERTISEMENT

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಮನೆಗೆ ಪೊಲೀಸರು ನೋಟಿಸ್ ಅಂಟಿಸಿದ್ದಾರೆ.

‘ಯಾರಾದರೂ ಚಿತ್ರಮಂದಿರಕ್ಕೆ ಬೆಂಕಿ ಹಚ್ಚಿದರೆ ನಾವು ಹೊಣೆಯಾಗಲು ಸಾಧ್ಯವೇ? ನಾನು ನೋಟಿಸ್ ತೆಗೆದುಕೊಳ್ಳುವುದಿಲ್ಲ. ಕಾನೂನು ಪ್ರಕಾರ ಕಾಂಪೌಂಡ್‌ಗೆ ನೋಟಿಸ್ ಅಂಟಿಸಿರುವುದಕ್ಕೆ ನನ್ನ ವಿರೋಧವಿಲ್ಲ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.