ADVERTISEMENT

ರಷ್ಯಾದಲ್ಲಿ ಸೆಲ್ಫಿಗೆ ಪೋಸ್‌ ನೀಡಿ ಅಭಿಮಾನಿಗಳನ್ನು ರಂಜಿಸಿದ ಸಲ್ಮಾನ್‌–ಕತ್ರಿನಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಆಗಸ್ಟ್ 2021, 10:38 IST
Last Updated 25 ಆಗಸ್ಟ್ 2021, 10:38 IST
‘ಟೈಗರ್‌–3’ ಚಿತ್ರದ ಪೋಸ್ಟರ್
‘ಟೈಗರ್‌–3’ ಚಿತ್ರದ ಪೋಸ್ಟರ್   

ಮುಂಬೈ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಮತ್ತು ಕತ್ರಿನಾ ಕೈಫ್‌ ಜೋಡಿ ಸೆಲ್ಫಿಗೆ ಪೋಸ್‌ ನೀಡಿದ್ದು, ಅಭಿಮಾನಿಗಳನ್ನು ರಂಜಿಸಿದ್ದಾರೆ.

ಹೌದು, ಸದ್ಯ ರಷ್ಯಾದಲ್ಲಿರುವ ಸಲ್ಮಾನ್‌– ಕತ್ರಿನಾ, ‘ಟೈಗರ್‌–3’ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿದ್ದಾರೆ. ಚಿತ್ರದ ಶೂಟಿಂಗ್‌ ನಡೆಯುತ್ತಿದ್ದ ವೇಳೆ ರಷ್ಯಾದಲ್ಲಿರುವ ಅಭಿಮಾನಿಗಳು ನೆಚ್ಚಿನ ನಟ–ನಟಿಯೊಂದಿಗೆ ಫೋಟೊಗಳನ್ನು ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಇತ್ತೀಚಿಗೆ ಸಲ್ಮಾನ್‌ ಅವರ ಫಸ್ಟ್‌ ಲುಕ್‌ ಆನ್‌ಲೈನ್‌ನಲ್ಲಿ ಸೋರಿಕೆಯಾಗಿತ್ತು. ಸದ್ಯ ಇದೀಗ ಫೋಟೊ ಮತ್ತು ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗಿವೆ.

ADVERTISEMENT

ಈಗಾಗಲೇ ಟೈಗರ್–3 ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಂಬೈನಲ್ಲಿ ಮುಕ್ತಾಯವಾಗಿದೆ. ಇದರಲ್ಲಿ ಕತ್ರಿನಾ ಕೂಡ ಭಾಗಿಯಾಗಿದ್ದರು.

ಇದೀಗ ರಷ್ಯಾ, ಆಸ್ಟ್ರೀಯ ಹಾಗೂ ಟರ್ಕಿಯಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಆಗಸ್ಟ್ 18ರಂದು ಪ್ರಯಾಣ ಬೆಳೆಸಿರುವ ಚಿತ್ರತಂಡ 45 ದಿನಗಳ ಕಾಲ ವಿದೇಶಗಳಲ್ಲಿ ತಂಗಲಿದೆ.

ಮನೀಶ್ ಶರ್ಮಾ ಟೈಗರ್‌–3 ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇಮ್ರಾನ್ ಹಶ್ಮಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.