ADVERTISEMENT

ಯಶ್ ನಟನೆಯ ‘ಟಾಕ್ಸಿಕ್‌’ನಲ್ಲಿ ಕಿಯಾರಾ ಅಡ್ವಾಣಿ: ಫಸ್ಟ್‌ ಲುಕ್ ಪೋಸ್ಟರ್ ಬಿಡುಗಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಡಿಸೆಂಬರ್ 2025, 7:26 IST
Last Updated 21 ಡಿಸೆಂಬರ್ 2025, 7:26 IST
   

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್‌ಅಪ್’ ಸಿನಿಮಾದಲ್ಲಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ನಟಿಸಿದ್ದು, ಅವರ ಫಸ್ಟ್‌ ಲುಕ್‌ ಪೋಸ್ಟರ್ ಅನ್ನು ಚಿತ್ರತಂಡ ಭಾನುವಾರ ಬಿಡುಗಡೆ ಮಾಡಿದೆ.

ಟಾಕ್ಸಿಕ್ ಸಿನಿಮಾದಲ್ಲಿ ನಟಿ ಕಿಯಾರಾ ಅಡ್ವಾಣಿ ನಾಡಿಯಾ ಎನ್ನುವ ಪಾತ್ರದಲ್ಲಿ ನಟಿಸಿದ್ದು, ಪೋಸ್ಟರ್‌ನಲ್ಲಿ ಗ್ಲಾಮರಸ್‌ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲಿ ಅವರು ಆಫ್-ಶೋಲ್ಡರ್ ವೆಲ್ವೆಟ್ ಗೌನ್ ಧರಿಸಿ ವೇದಿಕೆಯ ಮೇಲೆ ನಿಂತಿದ್ದಾರೆ.

ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಟಾಕ್ಸಿಕ್ ಸಿನಿಮಾವನ್ನು ಏಕಕಾಲದಲ್ಲಿ ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಶೂಟಿಂಗ್‌ ಮಾಡಲಾಗುತ್ತಿದೆ. 2026ರ ಮಾರ್ಚ್ 19ರಂದು ಬಿಡುಗಡೆಯಾಗಲಿದೆ.

ADVERTISEMENT

ಟಾಕ್ಸಿಕ್ ಸಿನಿಮಾವನ್ನು ಗೀತು ಮೋಹನ್‌ದಾಸ್ ಅವರು ನಿರ್ದೇಶಿಸಿದ್ದು, ವಿಎನ್ ಪ್ರೋಡಕ್ಷನ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಶನ್ ನಿರ್ಮಾಣ ಮಾಡುತ್ತಿದೆ.

34 ವರ್ಷದ ಕಿಯಾರಾ ಅಡ್ವಾಣಿ, ಇತ್ತೀಚೆಗೆ ಹೃತಿಕ್ ರೋಷನ್ ಹಾಗೂ ಜೂ. ಎನ್‌ಟಿಆರ್ ನಟನೆಯ ಬಾಲಿವುಡ್‌ನ ‘ವಾರ್‌ –2’ ಸಿನಿಮಾದಲ್ಲಿ ನಟಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.