
ನಟ ಯಶ್
ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದೆ. ಇನ್ನೇನು ಕೆಲವೇ ದಿನಗಳಲ್ಲಿ ನಟ ಯಶ್ ಅವರನ್ನು ರಾಯ, ಟಿಕೆಟ್ ಪಾತ್ರದಲ್ಲಿ ದೊಡ್ಡ ಪರದೆ ಮೇಲೆ ಕಣ್ತುಂಬಿಕೊಳ್ಳಲು ಕಾಯುತ್ತಿದ್ದ ಅಭಿಮಾನಿಗಳಿ ಇನ್ನಷ್ಟು ದಿನ ಕಾಯುವುದು ಅನಿವಾರ್ಯವಾಗಿದೆ.
ನಿರ್ದೇಶಕಿ ಗೀತು ಮೋಹನ್ದಾಸ್ ಅವರು ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅಸಲಿಗೆ ಈ ಸಿನಿಮಾ ಮುಂದೂಡಿಕೆ ಮಾಡುತ್ತಿರುವುದು ಏಕೆ ಎಂಬುವುದರ ಬಗ್ಗೆಯೂ ಸ್ಪಷ್ಟನೆ ನೀಡಿದ್ದಾರೆ. ಪೋಸ್ಟರ್ ಹಂಚಿಕೊಂಡಿರುವ ನಿರ್ದೇಶಕಿ, ಅದರಲ್ಲಿ ಸಿನಿಮಾ ಮಾರ್ಚ್ 19ಕ್ಕೆ ಅಲ್ಲ, ಬದಲಾಗಿ ಜೂನ್ 4ಕ್ಕೆ ಎಂದು ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಟಾಕ್ಸಿಕ್ ಸಿನಿಮಾ ಬಿಡುಗಡೆಗೆ ಇರಾನ್–ಅಮೆರಿಕ, ಇಸ್ರೇಲ್ ಯುದ್ದದ ಕಾರ್ಮೋಡ ಆವರಿಸಿದೆ. ಸಿನಿಮಾವನ್ನು ಏಕಕಾಲಕ್ಕೆ ಜಾಗತಿಕವಾಗಿ ಬಿಡುಗಡೆ ಮಾಡಲು ಯೋಜನೆ ಹೊಂದಿದ್ದ ಚಿತ್ರತಂಡಕ್ಕೆ ಯುದ್ಧದ ಆತಂಕದಿಂದಾಗಿ ಹಿನ್ನಡೆಯಾಗುವ ಸಾಧ್ಯತೆ ಇರುವುದರಿಂದ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ ಮಾಡಲಾಗಿದೆ.
ಟಾಕ್ಸಿಕ್
ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನಪ್ಸ್ ಎಂಬುದು ನಾವು ಜಾಗತಿಕ ಪ್ರೇಕ್ಷಕರನ್ನು ಗಮನದಲ್ಲಿಟ್ಟುಕೊಂಡು ನಿರ್ಮಿಸಿದ ಚಿತ್ರವಾಗಿದೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಚಿತ್ರೀಕರಿಸಲಾಗಿರುವ ಸಿನಿಮಾವು ಪ್ರಪಂಚದಾದ್ಯಂತದ ವೀಕ್ಷಕರೊಂದಿಗೆ ಸಂಪರ್ಕ ಸಾಧಿಸುವ ದೃಢವಿಶ್ವಾಸದೊಂದಿಗೆ ನಿರ್ಮಿಸಲಾಗಿದೆ.
ಹಲವು ವರ್ಷಗಳ ಶ್ರಮದ ಬಳಿಕ ಮಾರ್ಚ್ 19ರಂದು ನಮ್ಮ ಸಿನಿಮಾವನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ನಾವು ಉತ್ಸುಕರಾಗಿದ್ದೇವು. ಆದರೆ ಕಾರಣಾಂತರಗಳಿಂದ ನಿಮ್ಮನ್ನು ಆ ದಿನ ತಲುಪಲು ಸಾಧ್ಯವಾಗುತ್ತಿಲ್ಲ.
ನಮ್ಮ ಸಿನಿಮಾ ಜೂನ್ 4ರಂದು ಪ್ರಪಂಚದಾದ್ಯಂತದ ಚಿತ್ರಮಂದಿರಗಳಲ್ಲಿ ಕನ್ನಡ, ಇಂಗ್ಲಿಷ್ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದು ಬರೆದುಕೊಂಡಿದ್ದಾರೆ.
ವಿಶೇಷವಾಗಿ, ಪಶ್ಚಿಮ ಏಷ್ಯಾ ದೇಶಗಳಲ್ಲಿ ಪ್ರಸ್ತುತ ಇರುವ ಸನ್ನಿವೇಶ ಯುದ್ಧದ ಅನಿಶ್ಚಿತತೆ, ಸಾಧ್ಯವಾದಷ್ಟು ವಿಶಾಲ ಪ್ರೇಕ್ಷಕರನ್ನು ತಲುಪುವ ಮತ್ತು ಸಂಪರ್ಕಿಸುವ ನಮ್ಮ ಗುರಿಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಹಾಗಾಗಿ ಮಾರ್ಚ್ 19ರಂದು ನಿಮ್ಮನ್ನು ತಲುಪಲು ಸಾಧ್ಯವಾಗುತ್ತಿಲ್ಲ. ನಮ್ಮ ಸಿನಿಮಾ ಜೂನ್ 4, 2026ರಂದು ಪ್ರಪಂಚದಾದ್ಯಂತದ ಚಿತ್ರಮಂದಿರಗಳಲ್ಲಿ ಕನ್ನಡ, ಇಂಗ್ಲಿಷ್ ಮತ್ತು ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಎಂದು ಬರೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.