
ನಟ ಯಶ್
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಟೀಸರ್ ಇಂದು (ಫೆ.20) ಬಿಡುಗಡೆಯಾಗಿದೆ. ಕೆವಿಎನ್ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾದ 8 ಗಂಟೆಯಲ್ಲಿ ಟಾಕ್ಸಿಕ್ ಟೀಸರ್ ದಾಖಲೆಯ ವೀಕ್ಷಣೆ ಪಡೆದುಕೊಂಡಿದೆ.
ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳ ಹಾಗೂ ಇಂಗ್ಲಿಷ್‌ನಲ್ಲಿ ಟೀಸರ್ ಬಿಡುಗಡೆಯಾಗಿದೆ. ಅದರಲ್ಲೂ ಕನ್ನಡದಲ್ಲಿ 20.9 ಲಕ್ಷ, ಹಿಂದಿಯಲ್ಲಿ 1 ಕೋಟಿ, ತೆಲುಗಿನಲ್ಲಿ 20 ಲಕ್ಷ, ತಮಿಳಿನಲ್ಲಿ 10 ಲಕ್ಷ, ಮಲಯಾಳದಲ್ಲಿ 7 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದುಕೊಂಡು ಮುನ್ನುಗ್ಗುತ್ತಿದೆ.
ಇಷ್ಟು ದಿನ ಟಾಕ್ಸಿಕ್ ಅಪ್‌ಡೇಟ್‌ಗಾಗಿ ಕಾಯುತ್ತಿದ್ದ ಅಭಿಮಾನಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. ಬಿಡುಗಡೆಯಾದ ಟೀಸರ್‌ನಲ್ಲಿ ‘ಈ ಸಲ ಯುದ್ಧವೇ ಬೇರೆ’ ಅನ್ನೋ ಡೈಲಾಗ್ ಇದ್ದು, ವಿಭಿನ್ನ ಲುಕ್‌ನಲ್ಲಿ ನಟ ಯಶ್ ಅಬ್ಬರಿಸಿದ್ದಾರೆ. ಟೀಸರ್‌ನಲ್ಲಿ ರಾಯನಾಗಿ ಯಶ್ ಘರ್ಜಿಸಿದ್ದಾರೆ. 1 ನಿಮಿಷ 55 ಸೆಕೆಂಡ್ ಇರುವ ಟಾಕ್ಸಿಕ್ ಟೀಸರ್ ಇದಾಗಿದ್ದು, ರಕ್ತಸಾಗರ ಹರಿಸುವ ರಾಯ ಎರಡು ಶೇಡ್‌ನಲ್ಲಿ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದಾರೆ.
ಟಾಕ್ಸಿಕ್ ಸಿನಿಮಾ 2026ರ ಮಾರ್ಚ್ 19ರಂದು ಬಿಡುಗಡೆಯಾಗುತ್ತಿದ್ದು, ಸಿನಿಮಾ ಬಿಡುಗಡೆಗೆ ತಿಂಗಳು ಬಾಕಿ ಇರುವಾಗಲೇ ಆ್ಯಕ್ಷನ್ ಟೀಸರ್ ಧೂಳೆಬ್ಬಿಸೋಕೆ ಸಜ್ಜಾಗಿದೆ. ಇನ್ನು, ಗೀತು ಮೋಹನ್‌ದಾಸ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಟಾಕ್ಸಿಕ್ ಸಿನಿಮಾದಲ್ಲಿ ಸ್ಟಾರ್ ನಟಿಯರ ದೊಡ್ಡ ಸಮೂಹವೇ ಇದೆ. ನಯನತಾರಾ, ರುಕ್ಮಿಣಿ ವಸಂತ್, ಹುಮಾ ಖುರೇಷಿ, ಕಿಯಾರಾ ಅಡ್ವಾಣಿ ಹಾಗೂ ತಾರಾ ಅವರ ಪಾತ್ರಗಳನ್ನು ಈಗಾಗಲೇ ಪರಿಚಯಿಸಲಾಗಿದೆ. ಈ ಸಿನಿಮಾ ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಯಶ್ ಅವರ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ನಿರ್ಮಾಣ ಮಾಡಿದೆ. ವಿಶೇಷ ಏನೆಂದರೆ ಈ ಸಿನಿಮಾದ ಕಥೆ, ಚಿತ್ರಕಥೆ, ಡೈಲಾಗ್ ಅನ್ನು ರಾಕಿಂಗ್ ಸ್ಟಾರ್ ಯಶ್ ಬರೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.