ADVERTISEMENT

ಟಾಕ್ಸಿಕ್‌ Vs ಧುರಂಧರ್‌ 2: ಒಂದೇ ದಿನ ಬಿಡುಗಡೆಗೆ ಸಿದ್ಧವಾದ ಸ್ಟಾರ್ ನಟರ ಸಿನಿಮಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಫೆಬ್ರುವರಿ 2026, 6:36 IST
Last Updated 3 ಫೆಬ್ರುವರಿ 2026, 6:36 IST
<div class="paragraphs"><p><strong>ರಣವೀರ್ ಸಿಂಗ್, ನಟ ಯಶ್‌</strong></p></div>

ರಣವೀರ್ ಸಿಂಗ್, ನಟ ಯಶ್‌

   

ಮಾರ್ಚ್ 19ರಂದು ಸ್ಯಾಂಡಲ್‌ವುಡ್‌ ಹಾಗೂ ಬಾಲಿವುಡ್‌ ಚಿತ್ರರಂಗದ ಮಧ್ಯೆ ಭಾರಿ ಪೈಪೋಟಿ ನಡೆಯಲಿದೆ. ಅಂದು ರಾಕಿಂಗ್‌ ಸ್ಟಾರ್ ಯಶ್‌ ನಟನೆಯ ‘ಟಾಕ್ಸಿಕ್’ ಹಾಗೂ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಸಿನಿಮಾಗಳು ತೆರೆಗೆ ಬರಲು ಸಜ್ಜಾಗಿವೆ.

ಈಗಾಗಲೇ ಧುರಂಧರ್ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸಾವಿರ ಕೋಟಿ ಬಾಚಿಕೊಂಡಿದೆ. ಹೀಗಾಗಿ ಧುರಂಧರ್ 2 ಸಿನಿಮಾದ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ. ಇತ್ತ ನಟ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಬಗ್ಗೆಯೂ ನಿರೀಕ್ಷೆ ಹೆಚ್ಚಾಗಿದೆ. ಆದರೆ ಈ ಎರಡು ಸೂಪರ್‌ ಸ್ಟಾರ್‌ಗಳ ಸಿನಿಮಾ ಒಂದೇ ದಿನ ತೆರೆಗೆ ಬರುತ್ತಿದ್ದು, ಎರಡೂ ಸಿನಿಮಾಗಳ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲ ಮನೆಮಾಡಿದೆ.

ADVERTISEMENT

ಈ ಹಿಂದೆ ಧುರಂಧರ್ ಸಿನಿಮಾ ಹಿಂದಿಯಲ್ಲಿ ಮಾತ್ರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಆದರೆ ಈಗ ಹಿಂದಿ ಮಾತ್ರವಲ್ಲದೇ ಪ್ರೇಕ್ಷಕರನ್ನು ಸೆಳೆಯಲು ಮಾರ್ಚ್ 19ರಂದು ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಟಾಕ್ಸಿಕ್ ಚಿತ್ರಕ್ಕೆ ಸೆಡ್ಡು ಹೊಡೆಯಲು ಧುರಂಧರ್ ತಂಡ ದೊಡ್ಡ ಯೋಜನೆಯನ್ನು ರೂಪಿಸಿದ್ದು, ಇದರಲ್ಲಿ ಎಷ್ಟು ಗೆಲುವು ಸಾಧಿಸಲಿದೆ ಎಂದು ಕಾದು ನೋಡಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.