ಹೈದರಾಬಾದ್: ತೆಲುಗು ನಟ ಗೋಪಿಚಂದ್ ಅಭಿನಯದ ‘ಪಕ್ಕಾ ಕಮರ್ಷಿಯಲ್‘ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ.
ಗೋಪಿಚಂದ್‌ಗೆ ನಾಯಕಿಯಾಗಿ ರಾಶಿ ಖನ್ನಾ ನಟಿಸಿದ್ದಾರೆ.‘ಪಕ್ಕಾ ಕಮರ್ಷಿಯಲ್‘ ಸಿನಿಮಾವನ್ನು ಮಾರುತಿ ನಿರ್ದೇಶನ ಮಾಡಿದ್ದಾರೆ.
ಈ ಚಿತ್ರದ ಟ್ರೈಲರ್ ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ 5 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಕಂಡಿದೆ. ಈ ಸಿನಿಮಾ ಜುಲೈ 1ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಬನ್ನಿ ವಾಸು ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಜೇಕ್ಸ್ ಬಿಜಾಯ್ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ.
ಗೋಪಿಚಂದ್ ಅಭಿನಯದ ಹಲವು ಸಿನಿಮಾಗಳು ಬಾಕ್ಸ್‌ಆಫೀಸ್‌ನಲ್ಲಿ ಹಿಟ್ ಆಗಿಲ್ಲ. ‘ಪಕ್ಕಾ ಕಮರ್ಷಿಯಲ್‘ ಸಿನಿಮಾದ ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.