ADVERTISEMENT

ಗೋಲ್ಡನ್‌ ಸ್ಟಾರ್‌ ಹೆಜ್ಜೆಯಲ್ಲಿ ...ಲಿಟ್ಲ್‌ ಸ್ಟಾರ್

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2022, 8:47 IST
Last Updated 10 ನವೆಂಬರ್ 2022, 8:47 IST
ರಚನಾ ಇಂದರ್‌, ಗಣೇಶ್‌, ಅಧಿತಿ ಪ್ರಭುದೇವ, ಮೇಘಾ ಶೆಟ್ಟಿ
ರಚನಾ ಇಂದರ್‌, ಗಣೇಶ್‌, ಅಧಿತಿ ಪ್ರಭುದೇವ, ಮೇಘಾ ಶೆಟ್ಟಿ   

ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ಅಭಿನಯಿಸಿರುವ ‘ತ್ರಿಬಲ್ ರೈಡಿಂಗ್’ ಚಿತ್ರಕ್ಕಾಗಿ ವಿ. ನಾಗೇಂದ್ರ ಪ್ರಸಾದ್ ಅವರು ಬರೆದಿರುವ ‘ಟ್ವಿಂಕಲ್ ಟ್ವಿಂಕಲ್ ಲಿಟ್ಲ್‌ ಸ್ಟಾರ್’ ಎಂಬ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಭೂಷಣ್ ನೃತ್ಯ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಬಿಡುಗಡೆಯಾದ ಕ್ಷಣದಿಂದಲೇ ಈ ಹಾಡು ಬಾರಿ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಅಧಿತಿ ಪ್ರಭುದೇವ, ಮೇಘಾ ಶೆಟ್ಟಿ, ರಚನಾ ಇಂದರ್‌ ಈ ಚಿತ್ರದ ನಾಯಕಿಯರು.

ಸಾಯಿಕಾರ್ತಿಕ್ ಸಂಗೀತ ನೀಡಿರುವ ಈ ಹಾಡನ್ನು ವಿಜಯ ಪ್ರಕಾಶ್ ಹಾಡಿದ್ದಾರೆ.‌ರಾಮ್ ಗೋಪಾಲ್ ವೈ.ಎಂ. ಈ ಚಿತ್ರದ ನಿರ್ಮಾಪಕರು.

‘ನಮ್ಮ ‘ತ್ರಿಬಲ್ ರೈಡಿಂಗ್’ ಶುರುವಾಗಿದ್ದು, ಕೊರೋನ ಸಮಯದಲ್ಲಿ. ಚಿತ್ರೀಕರಣಕ್ಕೆ ಅನುಮತಿ ಸಿಕ್ಕ ಕೂಡಲೇ ಮೈಸೂರಿನಲ್ಲಿ ಚಿತ್ರೀಕರಣ ಆರಂಭಿಸಿದ್ದೆವು. ಅದೂ ಆಸ್ಪತ್ರೆಯಲ್ಲಿ. ಎಲ್ಲರಲ್ಲೂ ಭಯದ ವಾತಾವರಣ. ಆ ಸಮಯದಲ್ಲಿ ಚಿತ್ರೀಕರಣ ಮಾಡಲಾಯಿತು. ದೇವರ ದಯೆಯಿಂದ ಯಾವುದೇ ತೊಂದರೆ ಆಗಲಿಲ್ಲ. ಇನ್ನೂ ಈಗಾಗಲೇ ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿವೆ.ಈಗ ಮೂರನೇ ಹಾಡು ಬಿಡುಗಡೆಯಾಗಿದೆ. ಹಿಂದಿನ ಎರಡು ಹಾಡುಗಳು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ, ಜನಪ್ರಿಯವಾಗಿವೆ. ನವೆಂಬರ್ ಹದಿನೈದರಂದು ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. ಇಪ್ಪತ್ತೈದರಂದು ಚಿತ್ರ ತೆರೆಗೆ ಬರಲಿದೆ. ಇಡೀ ಚಿತ್ರತಂಡದ ಸಹಕಾರದಿಂದ ‘ತ್ರಿಬಲ್ ರೈಡಿಂಗ್’ ಚೆನ್ನಾಗಿ ಬಂದಿದೆ. ಪ್ರೇಕ್ಷಕರಿಗೂ ಪ್ರಿಯವಾಗುವ ವಿಶ್ವಾಸವಿದೆ’ ಎಂದರು ನಾಯಕ ಗಣೇಶ್.

ADVERTISEMENT

ಈ ಹಿಂದೆ ಬಿಡುಗಡೆಯಾಗಿರುವ ಎರಡು ಹಾಡುಗಳು ನಿರೀಕ್ಷೆಗೂ ಮೀರಿ ಯಶಸ್ವಿಯಾಗಿವೆ. ಈ ಹಾಡು ಕೂಡ ಸುಮಧುರವಾಗಿದೆ ಎಂದು ಹಾಡಿನ ಬಗ್ಗೆ ಮಾಹಿತಿ ನೀಡಿದ್ದ ನಿರ್ದೇಶಕ ಮಹೇಶ್ ಗೌಡ, ನವೆಂಬರ್ 25 ಚಿತ್ರ ಬಿಡುಗಡೆಯಾಗುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.