ತೆಲುಗಿನ ಸ್ಟಾರ್ ನಟ ಪವನ್ ಕಲ್ಯಾಣ ಪುತ್ರ ಅಕಿರ ನಂದನ್ ಸಿನಿಮಾರಂಗಕ್ಕೆ ಪದಾರ್ಪಣೆ ಮಾಡುವುದು ಬಹುತೇಕ ಖಚಿತ ಎಂಬುದು ಟಾಲಿವುಡ್‌ನಲ್ಲಿ ಸದ್ಯ ಹರಿದಾಡುತ್ತಿರುವ ಸುದ್ದಿ!
ಇದಕ್ಕಾಗಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ ಎನ್ನಲಾಗಿದೆ
ಅಕಿರ ನಂದನ್ ನಟಿಸುತ್ತಿರುವ ಮೊದಲ ಸಿನಿಮಾಗೆ ತ್ರಿವಿಕ್ರಮ ಶ್ರೀನಿವಾಸ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಮತ್ತೊಂದು ವಿಶೇಷತೆ ಎಂದರೆ ಈ ಸಿನಿಮಾ ಪವನ್ ಕಲ್ಯಾಣ್ ಉಸ್ತುವಾರಿಯಲ್ಲಿ ನಿರ್ಮಾಣವಾಗುತ್ತಿದೆ ಎಂದು ತಿಳಿದು ಬಂದಿದೆ.
ಇದಕ್ಕೆ ಪುಷ್ಠಿ ನೀಡುವಂತೆ ಪವನ್ ಮಾಜಿ ಪತ್ನಿ ರೇಣು ದೇಸಾಯಿ ವಿಡಿಯೊವೊಂದನ್ನು ಹಂಚಿಕೊಂಡಿದ್ದಾರೆ. ಅದು ಅಕಿರ ನಂದನ್ ಮಾರ್ಷಲ್ ಆರ್ಟ್ಸ್ (Martial Arts) ಕಲಿಕೆಯವಿಡಿಯೊ. ಇದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಪವನ್ ಅಭಿಮಾನಿಗಳು ಜ್ಯೂನಿಯರ್ ಪವನ್ ಎಂದು ಸಿಕ್ಕಾಪಟ್ಟೆ ಕ್ರೇಜ್ ಹುಟ್ಟುಹಾಕುತ್ತಿದ್ದಾರೆ.
ಪವನ್ ಕಲ್ಯಾಣ್ ಕೂಡಮಾರ್ಷಲ್ ಆರ್ಟ್ಸ್, ಕರಾಟೆ ಕಲಿತು ತಮ್ಮ ಕೆಲವು ಸಿನಿಮಾಗಳಿಗೆ ಸಾಹಸ ಸಂಯೋಜಕರಾಗಿ ಕೆಲಸ ಮಾಡಿದ್ದಾರೆ.
ಪವನ್ ಕೂಡ ಅಕಿರ ನಟನೆಯ ಸಿನಿಮಾ ನಿರ್ಮಾಣಕ್ಕೆ ಉತ್ಸುಕರಾಗಿದ್ದಾರೆ ಎನ್ನಲಾಗಿದೆ. ಆದಾಗ್ಯೂ ಅಕಿರ ಸಾಕಷ್ಟು ಕಲಿಯಬೇಕಿದೆ ಎಂದು ಪವನ್ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ಟಾಲಿವುಡ್ ಮಾಧ್ಯಮಗಳ ವರದಿ ಮಾಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.