ADVERTISEMENT

ಚಪ್ಪಲಿ ಧರಿಸಿ ’ಶಿವ’ ದೇವಾಲಯದಲ್ಲಿ ಓಡಾಟ: ನಟಿ ತ್ರಿಷಾಗೆ ಬಂಧನ ಭೀತಿ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2021, 6:09 IST
Last Updated 8 ಸೆಪ್ಟೆಂಬರ್ 2021, 6:09 IST
ತ್ರಿಷಾ
ತ್ರಿಷಾ   

ಬಹು ಭಾಷೆ ತಾರೆ ತ್ರಿಷಾ ಕೃಷ್ಣನ್‌ ಅವರಿಗೆ ಸಂಕಷ್ಟ ಎದುರಾಗಿದ್ದು ಅವರು ಬಂಧನ ಭೀತಿಯಲ್ಲಿದ್ದಾರೆ.

ಚಿತ್ರೀಕರಣದ ಸಂದರ್ಭದಲ್ಲಿ ಯಡವಟ್ಟು ಮಾಡಿಕೊಂಡಿರುವ ನಟಿಯವಿರುದ್ಧ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ತ್ರಿಷಾ

ಮಣಿರತ್ನಂ ನಿರ್ದೇಶನದ 'ಪೊನ್ನಿಯಿನ್ ಸೆಲ್ವನ್' ಸಿನಿಮಾದಲ್ಲಿ ತ್ರಿಷಾ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದರ ಚಿತ್ರೀಕರಣ ಇತ್ತೀಚೆಗೆ ಇಂಧೋರ್‌ನ ಶಿವ ದೇವಾಲಯದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅವರು ಚಪ್ಪಲಿ ಹಾಕಿಕೊಂಡುದೇವಾಲಯದಲ್ಲಿ ಓಡಾಡಿರುವುದು ವಿವಾದಕ್ಕೆ ಕಾರಣವಾಗಿದೆ.

ADVERTISEMENT

ತ್ರಿಷಾ, ದೇವಾಲಯದ ಗರ್ಭಗುಡಿ ಮುಂಭಾಗ ಚಪ್ಪಲಿ ಧರಿಸಿ, ಶಿವಲಿಂಗ ಹಾಗೂ ನಂದಿಯ ಮಧ್ಯೆ ನಡೆದಾಡಿದ್ದಾರೆ. ಇದರ ಚಿತ್ರಗಳ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ತ್ರಿಷಾ ಅವರು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಹಿಂದೂಪರ ಸಂಘಟನೆಗಳು ಆರೋಪ ಮಾಡಿದ್ದು ಅವರ ವಿರುದ್ಧ ದೂರು ದಾಖಲಿಸಿವೆ. ಯಾವ ಸಂಘಟನೆ ದೂರು ನೀಡಿದೆ ಎಂಬುದು ವರದಿಯಾಗಿಲ್ಲ.

ಕೆಲ ದಿನಗಳ ಹಿಂದೆ ಇದೇ ಸಿನಿಮಾದ ಚಿತ್ರೀಕರಣದ ವೇಳೆ ಕುದುರೆ ಸಾವನ್ನಪ್ಪಿತ್ತು. ಇದರ ತನಿಖೆ ಕೂಡ ಪ್ರಗತಿಯಲ್ಲಿದೆ.

ಪುನೀತ್‌ ರಾಜ್‌ಕುಮಾರ್ ಅಭಿನಯದ ’ಪವರ್’ ಸಿನಿಮಾದಲ್ಲಿ ತ್ರಿಷಾ ನಟಿಸಿದ್ದರು. ಈ ಸಿನಿಮಾ 2014ರಲ್ಲಿ ಬಿಡುಗಡೆಯಾಗಿತ್ತು. ಈಗ ಮತ್ತೆ ಪುನೀತ್‌ ನಟನೆಯ'ದ್ವಿತ್ವ' ಸಿನಿಮಾದಲ್ಲಿ ತ್ರಿಷಾ ನಾಯಕಿಯಾಗಿ ನಟಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.