ADVERTISEMENT

ತುಳು ಸಿನಿಮಾ ನಿರ್ದೇಶಕ ರಘು ಶೆಟ್ಟಿ ನಿಧನ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2021, 3:44 IST
Last Updated 18 ಏಪ್ರಿಲ್ 2021, 3:44 IST
ರಘು ಶೆಟ್ಟಿ
ರಘು ಶೆಟ್ಟಿ   

ಮಂಗಳೂರು: ತುಳು ಸಿನಿಮಾ ನಿರ್ದೇಶಕ ರಘು ಶೆಟ್ಟಿ (40) ಹೃದಯಾಘಾತದಿಂದ ಶನಿವಾರ ರಾತ್ರಿ ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ತುಳುವಿನ ‘ಅರ್ಜುನ್ ವೆಡ್ಸ್ ಅಮೃತ’ ಚಿತ್ರವನ್ನು ನಿರ್ದೇಶಿಸಿ ಸಿನಿ ರಸಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಕನ್ನಡ ಚಿತ್ರವೊಂದರ ನಿರ್ದೇಶನಕ್ಕೆ ಸಿದ್ಧತೆ ನಡೆಸಿದ್ದರು. ಅವರಿಗೆ ಪತ್ನಿ, ಪುತ್ರಿ ಇದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.