ನಟ ಕಿರಣ್‌ರಾಜ್ ನಟನೆಯ ‘ರಾನಿ’ ಸಿನಿಮಾ ರಿಲೀಸ್‌ಗೆ ಸಜ್ಜಾಗುತ್ತಿದ್ದು, ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಸಿನಿಮಾ ಆಗಸ್ಟ್ 30ರಂದು ತೆರೆಕಾಣುತ್ತಿದೆ.
‘ಬಡ್ಡೀಸ್’ ಸಿನಿಮಾ ಮೂಲಕ ಚಂದನವನದಲ್ಲಿ ಮಿಂಚಿದ ಕಿರಣ್‌ರಾಜ್, ‘ಕನ್ನಡತಿ’ ಧಾರಾವಾಹಿ ಬಳಿಕ ‘ರಾನಿ’ ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದರು. ಗುರುತೇಜ್ ಶೆಟ್ಟಿ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ‘ಈ ಬಾರಿ ಆ್ಯಕ್ಷನ್ ಕಮರ್ಷಿಯಲ್ ಸಿನಿಮಾ ಮಾಡಿದ್ದೇನೆ’ ಎನ್ನುವ ಗುರುತೇಜ್ ಶೆಟ್ಟಿ, ‘ಇದೊಂದು ಗ್ಯಾಂಗ್‌ಸ್ಟರ್ ಸಿನಿಮಾ ಆದರೂ ಕುಟುಂಬ ಸಮೇತ ನೋಡುವಂತಹ ಭಾವನಾತ್ಮಕ ವಿಷಯಗಳೂ ಚಿತ್ರದಲ್ಲಿವೆ’ ಎಂದಿದ್ದಾರೆ. ಸ್ಟಾರ್ ಕ್ರಿಯೇಷನ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗಿದ್ದು, ರವಿಶಂಕರ್, ಮೈಕೋ ನಾಗರಾಜ್, ಉಗ್ರಂ ರವಿ, ಉಗ್ರಂ ಮಂಜು, ಬಿ.ಸುರೇಶ, ಮಂಡ್ಯ ರಮೇಶ್, ಸುಜಯ್ ಶಾಸ್ತ್ರಿ, ಸೂರ್ಯ ಕುಂದಾಪುರ, ಧರ್ಮಣ್ಣ ಕಡೂರು, ಗಿರೀಶ್ ಹೀಗೆ ದೊಡ್ಡ ಕಲಾವಿದರ ದಂಡೇ ಚಿತ್ರದಲ್ಲಿದೆ.
ಸಮೀಕ್ಷಾ, ಅಪೂರ್ವ, ರಾದ್ಯಾ ಈ ಚಿತ್ರದ ನಾಯಕಿಯರು. ರಾಘವೇಂದ್ರ ಬಿ.ಕೋಲಾರ್ ಛಾಯಾಚಿತ್ರಗ್ರಹಣ, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಸಚಿನ್ ಬಸ್ರೂರ್ ಹಿನ್ನಲೆ ಸಂಗೀತ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.