ADVERTISEMENT

‘ತ್ರಿಕೋನ’ಕ್ಕೂ ಯುಎ ಪ್ರಮಾಣಪತ್ರ

​ಪ್ರಜಾವಾಣಿ ವಾರ್ತೆ
Published 15 ಜೂನ್ 2020, 12:05 IST
Last Updated 15 ಜೂನ್ 2020, 12:05 IST
ತ್ರಿಕೋನ ಚಿತ್ರದಲ್ಲಿ ಮಾರುತೇಶ್‌
ತ್ರಿಕೋನ ಚಿತ್ರದಲ್ಲಿ ಮಾರುತೇಶ್‌   

ತ್ರಿಭಾಷೆಗಳಲ್ಲಿ ನಿರ್ಮಾಣವಾಗಿರುವ ‘ತ್ರಿಕೋನ’ ಚಿತ್ರಕ್ಕೆ ಕನ್ನಡದಲ್ಲಿಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ. ಲಾಕ್‌ಡೌನ್‌ ತೆರವಾಗಿ ಚಿತ್ರಮಂದಿರ ಬಾಗಿಲು ತೆರೆದ ತಕ್ಷಣ ಸಿನಿಮಾ ಬಿಡುಗಡೆ ಮಾಡಲು ಚಿತ್ರ ತಂಡ ಯೋಜನೆ ರೂಪಿಸಿದೆ.

ಪೊಲೀಸ್ ಪ್ರಕ್ಕಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಜಶೇಖರ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಜತೆಗೆರಾಜಶೇಖರ್ ಅವರೇ ಕಥೆ ಬರೆದಿದ್ದಾರೆ. ‘143’ ಚಿತ್ರದ ಖ್ಯಾತಿಯ ಚಂದ್ರಕಾಂತ್ ನಿರ್ದೇಶನ ಮಾಡಿದ್ದಾರೆ.

ಚಿತ್ರಕ್ಕೆ ಯಾವುದೇ ಕತ್ತರಿ ಹಾಕದೆ, ಸೌಂಡ್ ಮ್ಯೂಟ್ ಸಹ ನೀಡದೆ ಸೆನ್ಸಾರ್ ಮಂಡಳಿ ಯು/ಎ ಅರ್ಹತಾ ಪತ್ರ ನೀಡಿದೆ.ತೆಲುಗು, ತಮಿಳಿನಲ್ಲೂ ಸದ್ಯದಲ್ಲೇ ಸೆನ್ಸಾರ್ ಆಗಲಿದೆ.ಮೂರು ಭಾಷೆಗಳಲ್ಲಿ ಮೂರು ಬೇರೆ ಚಿತ್ರಕಥೆಯೊಂದಿಗೆ ಚಿತ್ರ ನಿರ್ಮಿಸಿರುವುದು ಚಿತ್ರರಂಗದ ಇತಿಹಾಸದಲ್ಲೇ ಪ್ರಥಮ ಪ್ರಯತ್ನ ಎಂದಿದ್ದಾರೆ ನಿರ್ಮಾಪಕ ರಾಜಶೇಖರ್‌.

ADVERTISEMENT

ಸುರೇಂದ್ರನಾಥ್ ಸಂಗೀತ ನಿರ್ದೇಶನ, ಶ್ರೀನಿವಾಸ್ ವೆನಕೋಟ ಛಾಯಾಗ್ರಹಣ, ಜೀವನ್ ಪ್ರಕಾಶ್ ಸಂಕಲನ, ಹೈಟ್ ಮಂಜು ನೃತ್ಯ ನಿರ್ದೇಶನ ಹಾಗೂ ಜಾನಿ, ಚೇತನ್ ಡಿಸೋಜ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಸುರೇಶ್ ಹೆಬ್ಳೀಕರ್, ಲಕ್ಷ್ಮೀ, ಅಚ್ಯುತ ಕುಮಾರ್, ಸುಧಾರಾಣಿ, ಸಾಧುಕೋಕಿಲ, ಭಜರಂಗಿ ಮಾರುತೇಶ್, ರಾಜವೀರ್, ಅದಿತಿ ರಾಜ್, ಹಾಸಿನಿ ತಾರಾಬಳಗದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.