ಸೈಕಲಾಜಿಕಲ್ ಥ್ರಿಲ್ಲರ್ ಕಥಾವಸ್ತು ಹೊಂದಿರುವ ‘ಗಹನ’ ಚಿತ್ರ ವೀಕ್ಷಿಸಿದ ಸೆನ್ಸಾರ್ ಮಂಡಳಿಯು ಯಾವುದೇ ಕತ್ತರಿ ಪ್ರಯೋಗವಿಲ್ಲದೆ ಯು/ಎ ಸರ್ಟಿಫಿಕೇಟ್ ನೀಡಿದೆ.
ಜನವರಿಯಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರದ ಕಥೆ ಚಿತ್ರಕಥೆ ಸಂಭಾಷಣೆ, ನಿರ್ದೇಶನವನ್ನು ಪ್ರೀತ್ ಹಾಸನ್ ಮಾಡಿದ್ದಾರೆ. ಸಾಯಿ ಶ್ರೀನಿವಾಸ್ ಛಾಯಾಗ್ರಹಣದ ಇದೆ.
ಮಹೇಶ್ ಭಾರದ್ವಾಜ್ ಹಿನ್ನೆಲೆ ಸಂಗೀತ ನೀಡುತ್ತಿದ್ದಾರೆ. ವಿಜಯ್ ವಿಶ್ವಮಣಿ ಸಾಹಿತ್ಯವಿದೆ.ಓಂ ಶ್ರೀ ಸಾಯಿರಾಂ ಫಿಲಂಸ್ ಲಾಂಛನದಲ್ಲಿ ಆರ್. ಶ್ರೀನಿವಾಸ್ (ಸ್ಟಿಲ್ಸೀನು) ಈ ಚಿತ್ರಕ್ಕೆ ಹಣ ಹೂಡಿದ್ದಾರೆ.
ಆದಿತ್ಯಶೆಟ್ಟಿ, ಶರಣ್ಯಾ ಗೌಡ, ರಂಜಿನಿ, ಶಿವು ಇಂಚರಾ ಭೀಮಯ್ಯ, ಸ್ವಾತಿ ಶಿವಮೊಗ್ಗ, ಸುನೀಲ್ ಗೌಡ, ಸುಭಾಷ್ಚಂದ್ರ, ಸ್ವಾತಿ ಕೊಡಗು, ಚಂದ್ರು ತಾರಾಗಣದಲ್ಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.