

ನಟ ಉಗ್ರಂ ಮಂಜು ಮತ್ತು ಸಂಧ್ಯಾ
ಚಿತ್ರ: ಇನ್‌ಸ್ಟಾಗ್ರಾಂ
ಚಂದನವನದ ನಟ, ಬಿಗ್‌ಬಾಸ್ ಮಾಜಿ ಸ್ಪರ್ಧಿ ಉಗ್ರಂ ಮಂಜು ಅವರು ಇತ್ತೀಚೆಗೆ ಸಂಧ್ಯಾ ಎಂಬುವವರ ಜೊತೆಗೆ ಮದುವೆ ಆಗಿದ್ದರು.
ಜನವರಿ 23ರಂದು ಧರ್ಮಸ್ಥಳದಲ್ಲಿ ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.
ಇದೀಗ ಈ ಜೋಡಿ ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಮದುವೆಯ ಸುಂದರ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಉಗ್ರಂ ಮಂಜು ಅವರನ್ನು ಮದುವೆಯಾಗಿರುವ ಸಂಧ್ಯಾ ಅವರು ವೈದ್ಯಕೀಯ ಕ್ಷೇತ್ರದಲ್ಲಿದ್ದು ಅಂಗಾಂಗ ಕಸಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ.
ಜೊತೆಗೆ ಸಂಧ್ಯಾ ಅವರು ಸಾಮಾಜಿಕ ಮಾಧ್ಯಮದಲ್ಲಿಯೂ ಸಕ್ರಿಯರಾಗಿದ್ದಾರೆ.
ಸದ್ಯ ಮದುವೆ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳು ನವಜೋಡಿಗೆ ಶುಭ ಹಾರೈಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.