ADVERTISEMENT

ಬಿಗ್‌ಬಾಸ್ ಖ್ಯಾತಿಯ ಉಗ್ರಂ ಮಂಜು–ಸಂಧ್ಯಾ ಮದುವೆ ಎಲ್ಲಿ? ಯಾವಾಗ? ಇಲ್ಲಿದೆ ಮಾಹಿತಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಜನವರಿ 2026, 10:43 IST
Last Updated 22 ಜನವರಿ 2026, 10:43 IST
<div class="paragraphs"><p>ಉಗ್ರಂ ಮಂಜು–ಸಂಧ್ಯಾ</p></div>

ಉಗ್ರಂ ಮಂಜು–ಸಂಧ್ಯಾ

   

ಚಿತ್ರ: ಇನ್‌ಸ್ಟಾಗ್ರಾಂ

ಚಂದನವನದ ನಟ, ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಉಗ್ರಂ ಮಂಜು ಅವರ ನಿವಾಸದಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಉಗ್ರಂ ಮಂಜು ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಇತ್ತೀಚೆಗೆ ‌ಸಂಧ್ಯಾ ಖುಷಿ ಎಂಬುವವರ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಈ ಇಬ್ಬರು ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ‌

ಸಂಧ್ಯಾ ಹಾಗೂ ಉಗ್ರಂ ಮಂಜು

ಉಗ್ರಂ ಮಂಜು ಎಂದೇ ಖ್ಯಾತಿ ಪಡೆದುಕೊಂಡಿರುವ ಇವರು, ನಟ ಸುದೀಪ್‌ ಜತೆಗೆ ‘ಮ್ಯಾಕ್ಸ್‌’ನಲ್ಲಿ ನಟಿಸಿದ್ದರು. ನಂತರದ ದಿನಗಳಲ್ಲಿ ಮ್ಯಾಕ್ಸ್‌ ಮಂಜು ಎಂದು ಸಾಮಾಜಿಕ ಜಾಲತಾಣದಲ್ಲಿ ಹೆಸರನ್ನು ಬದಲಾಯಿಸಿಕೊಂಡರು. ಇತ್ತೀಚೆಗೆ ಬಿಗ್‌ಬಾಸ್‌ ಸೀಸನ್ 12ರ ಮನೆಗೆ ಅತಿಥಿಯಾಗಿ ಪ್ರವೇಶ ಮಾಡಿದ್ದರು.

ಉಗ್ರಂ ಮಂಜು, ಸಂಧ್ಯಾ

ನಟ ಉಗ್ರಂ ಮಂಜು ಮನೆಯಲ್ಲಿ ಈಗಾಗಲೇ ಮದುವೆ ಕಾರ್ಯಕ್ರಮಗಳು ಆರಂಭಗೊಂಡಿದ್ದು, ನಿನ್ನೆ ಅರಸಿಣ ಹಾಗೂ ಮೆಹೆಂದಿ ಶಾಸ್ತ್ರಗಳು ನಡೆದಿವೆ. ಈ ಜೋಡಿ ಜನವರಿ 23ರಂದು ಧರ್ಮಸ್ಥಳದಲ್ಲಿ ಸರಳವಾಗಿ ಮದುವೆಯಾಗಲು ನಿರ್ಧರಿಸಿದ್ದು, ಬಳಿಕ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಆರತಕ್ಷತೆ ನಡೆಯಲಿದೆ ಎಂದು ತಿಳಿದುಬಂದಿದೆ.

ನಟ ಉಗ್ರಂ ಮಂಜು ಹಾಗೂ ಕುಟುಂಬಸ್ಥರು

ಉಗ್ರಂ ಮಂಜು ಅವರನ್ನು ಮದುವೆಯಾಗುತ್ತಿರುವ ಸಂಧ್ಯಾ ಅವರು ವೈದ್ಯಕೀಯ ಕ್ಷೇತ್ರದಲ್ಲಿದ್ದು ಅಂಗಾಂಗ ಕಸಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿಯೂ ಸಂಧ್ಯಾ ಸಕ್ರಿಯರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.