ADVERTISEMENT

ಶೀರ್ಷಿಕೆಯಲ್ಲಿ ಕಾಣಿಸಿಕೊಂಡ ಅನ್ ಲಾಕ್ ರಾಘವ: ರಾಮಾ ರಾಮಾ ರೇ ನಿರ್ಮಾಪಕರ ಸಿನಿಮಾ

​ಪ್ರಜಾವಾಣಿ ವಾರ್ತೆ
Published 24 ಜುಲೈ 2022, 9:25 IST
Last Updated 24 ಜುಲೈ 2022, 9:25 IST
‘ಅನ್‌ಲಾಕ್‌ ರಾಘವ’ದಲ್ಲಿ ರಾಚೆಲ್‌ ಡೇವಿಡ್‌, ಮಿಲಿಂದ್‌
‘ಅನ್‌ಲಾಕ್‌ ರಾಘವ’ದಲ್ಲಿ ರಾಚೆಲ್‌ ಡೇವಿಡ್‌, ಮಿಲಿಂದ್‌   

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ, ‘ರಾಮಾ ರಾಮಾ ರೇ’, 'ಒಂದಲ್ಲಾ ಎರಡಲ್ಲಾ’, ‘ಮ್ಯಾನ್ ಆಫ್ ದಿ ಮ್ಯಾಚ್’ನಂತಹ ಅಪರೂಪದ ಸಿನಿಮಾ ಕಥೆ ಹೇಳಿ ಯಶಸ್ವಿಯಾಗಿರುವ ನಿರ್ದೇಶಕ ಸತ್ಯಪ್ರಕಾಶ್ ನಿರ್ಮಾಣದ ಹೊಸ ಸಿನಿಮಾ‘ಅನ್ ಲಾಕ್ ರಾಘವ’.

ಸತ್ಯ ಆ್ಯಂಡ್‌ ಮಯೂರ ಪಿಕ್ಚರ್ಸ್ ವತಿಯಿಂದ ಈ ಚಿತ್ರ ನಿರ್ಮಾಣವಾಗುತ್ತಿದೆ. ಚಿತ್ರದ ಶೀರ್ಷಿಕೆ ಹಾಗೂ ಫಸ್ಟ್‌ಲುಕ್‌ನ್ನು ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಇತ್ತೀಚೆಗೆ ಬಿಡುಗಡೆ ಮಾಡಿದರು.

ನಿರ್ಮಾಪಕ ಸತ್ಯಪ್ರಕಾಶ್ ಮಾತನಾಡಿ, ಈ ಕ್ಷೇತ್ರಕ್ಕೆಬಂದಾಗ ದೊಡ್ಡ ತಂಡ ಕಟ್ಟಬೇಕು ಎಂಬ ಆಸೆ ಇತ್ತು. ದೀಪಕ್ ಮಧುವನಹಳ್ಳಿ ನಿರ್ದೇಶನ ಮಾಡುತ್ತಿರುವ ಈ ಸಿನಿಮಾ ನಿಜವಾದ ಕಮರ್ಷಿಯಲ್ ಸಿನಿಮಾ. ಪ್ರಸ್ತುತಿಯೂ ಹೊಸ ರೀತಿ ಇದೆ. ಇಡೀ ಸಿನಿಮಾ ರೋಮ್ಯಾಂಟಿಕ್ ಕಾಮಿಡಿ ಒಳಗೊಂಡಿದೆ. ಇಲ್ಲಿ ಮೂರು ರೀತಿಯ ಕಾಮಿಡಿ ಇದೆ. ಪಾತ್ರ ಏನು ಮಾತನಾಡುತ್ತದೆ ಎಂದು ಗೊತ್ತಿಲ್ಲ. ಆದರೆ ಪ್ರೇಕ್ಷಕ ನಗುತ್ತಾನೆ. ಅನೂಪ್ ಸೀಳಿನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ’ ಎಂದರು.

ADVERTISEMENT

‘ಭಾಗ್ಯರಾಜ್’, ‘ಕಳ್ಬೆಟ್ಟದ ದರೋಡೆಕೋರರು’, ‘ರಾಜು ಜೇಮ್ಸ್ ಬಾಂಡ್’ ಚಿತ್ರಗಳನ್ನು ನಿರ್ದೇಶಿಸಿರುವ ದೀಪಕ್ ಮಧುವನಹಳ್ಳಿ ಈ ಚಿತ್ರದ ನಿರ್ದೇಶಕರು. ‘ವೀಕೆಂಡ್’ ಸಿನಿಮಾ ಮೂಲಕ ಭರವಸೆ ಮೂಡಿಸಿರುವ ನವನಟ ಮಿಲಿಂದ್ ನಾಯಕನಾಗಿ ಹಾಗೂ ‘ಲವ್ ಮಾಕ್ಟೇಲ್ – 2’ ಚಿತ್ರದ ರೇಚಲ್ ಡೇವಿಡ್ ನಾಯಕಿ. ಸಾಧುಕೋಕಿಲ, ಅವಿನಾಶ್, ರಮೇಶ್ ಭಟ್, ಸುಂದರ್ ವೀಣಾ, ಧರ್ಮಣ್ಣ ಕಡೂರು, ಭೂಮಿಶೆಟ್ಟಿ ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಲವಿತ್ ಛಾಯಾಗ್ರಹಣ ಹಾಗೂ ಅಜಯ್ ಕುಮಾರ್ ಸಂಕಲನವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.