ಕಬ್ಚ ಚಿತ್ರದ 5ನೇ ಹಂತದ ಚಿತ್ರೀಕರಣ ಅ. 4ರಿಂದ ಆರಂಭವಾಗಲಿದೆ. ಇದಕ್ಕಾಗಿ ಮಿನರ್ವ ಮಿಲ್‌ನಲ್ಲಿ ಭರ್ಜರಿ ಸೆಟ್ ಹಾಕಲಾಗಿದೆ.
ರಿಯಲ್ ಸ್ಟಾರ್ ಉಪೇಂದ್ರ, ಬಾಲಿವುಡ್ ನಟ ನವಾಬ್ ಶಾ ಸೇರಿದಂತೆ ಹಲವು ಖ್ಯಾತನಟರು ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ ಎಂದಿದೆ ಚಿತ್ರತಂಡ.ಕೆ.ಜಿ.ಎಫ್ ಖ್ಯಾತಿಯ ಕಲಾ ನಿರ್ದೇಶಕ ಶಿವಕುಮಾರ್ ಅವರ ನೇತೃತ್ವದಲ್ಲಿ ಸುಮಾರು ಒಂದು ತಿಂಗಳಿನಿಂದ ಮಿನರ್ವ ಮಿಲ್‌ನಲ್ಲಿ ಸೆಟ್ ನಿರ್ಮಾಣ ನಡೆದಿದೆ. ಇದೇ ಸೆಟ್‌ನಲ್ಲಿ ಸುಮಾರು 42ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ.
ಕೊನೆಯ ಹಂತದ ಚಿತ್ರೀಕರಣ ಹೈದರಾಬಾದ್‌ನಲ್ಲಿ ನಡೆಯಲಿದೆ.
ಆರ್.ಚಂದ್ರು ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರಲಿದೆ. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ ಪ್ರಧಾನ ಪಾತ್ರದಲ್ಲಿದ್ದಾರೆ. ಎಂ.ಟಿ.ಬಿ. ನಾಗರಾಜ್, ಆರ್. ಚಂದ್ರು ಸೇರಿ ಶ್ರೀ ಸಿದ್ದೇಶ್ವರ ಎಂಟರ್‌ಪ್ರೈಸಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.