ರಜನಿಕಾಂತ್
ಸೂಪರ್ ಸ್ಟಾರ್ ರಜನಿಕಾಂತ್ ನಟನೆ ಕೂಲಿ ಸಿನಿಮಾ ಪ್ಯಾನ್ ಇಂಡಿಯಾದಲ್ಲಿ ರಿಲೀಸ್ ಆಗಲಿದೆ.
ಆಗಸ್ಟ್ 14 ರಂದು ಬಿಡುಗಡೆಯಾಗಲಿರುವ ಈ ಸಿನಿಮಾ ಅದ್ದೂರಿ ಯಶಸ್ಸು ಕಾಣಲೆಂದು ತಲೈವಾ ಅಭಿಮಾನಿಗಳು ಮಧುರೈನ ತಿರುಪ್ಪರನಕುಂದ್ರಂನಲ್ಲಿರುವ ವೇಲುಕಂಠಮ್ಮನ್ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸನ್ ಪಿಕ್ಚರ್ಸ್ ಅಡಿಯಲ್ಲಿ ಕಲಾನಿತಿ ಮಾರನ್ ನಿರ್ಮಾಣದ ಕೂಲಿ ಸಿನಿಮಾವನ್ನು ಲೋಕೇಶ್ ಕನಕರಾಜ್ ನಿರ್ದೇಶಿಸಿದ್ದಾರೆ. ಕೂಲಿ ಸಿನಿಮಾದಲ್ಲಿ ರಜನಿಕಾಂತ್, ನಾಗಾರ್ಜುನ, ಉಪೇಂದ್ರ, ಶ್ರುತಿ ಹಾಸನ್, ಸತ್ಯರಾಜ್, ಅಮೀರ್ ಖಾನ್, ಪೂಜಾ ಹೆಗ್ಡೆ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.