ADVERTISEMENT

Kannada Cinema: ವೈಭೋಗ ಟೈಟಲ್ ಲಾಂಚ್

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2024, 23:56 IST
Last Updated 13 ಸೆಪ್ಟೆಂಬರ್ 2024, 23:56 IST
<div class="paragraphs"><p>ವೈಭೋಗ ಟೈಟಲ್ ಲಾಂಚ್</p></div>

ವೈಭೋಗ ಟೈಟಲ್ ಲಾಂಚ್

   

ಯೂ ಟರ್ನ್-2, ರಾಮು ಆ್ಯಂಡ್‌ ರಾಮು ಹಾಗೂ ಕರಿಮಣಿ ಮಾಲೀಕ ಚಿತ್ರಗಳ ನಂತರ ನಿರ್ದೇಶಕ ಚಂದ್ರು ಓಬಯ್ಯ ನಾಲ್ಕನೇ ಚಿತ್ರವನ್ನು ಕೈಗೆತ್ತಿಕೊಂಡಿದ್ದು, ಅದುವೇ ‘ವೈಭೋಗ.’ ಈಚೆಗೆ ಅದರ ಪೋಸ್ಟರ್‌ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಚಂದ್ರು, ಇದೊಂದು ಕಮರ್ಷಿಯಲ್‌ ಸಿನಿಮಾ. ಯೌವ್ವನದಲ್ಲಿ ಹುಟ್ಟುವ ಪ್ರೀತಿಗೋಸ್ಕರ ಹೆತ್ತವರ ಪ್ರೀತಿಯನ್ನು ಮರೆಯಬಾರದು. ಪ್ರೀತಿಯ ಜತೆಗೆ ಹೆತ್ತವರನ್ನು ಕಾಪಾಡಬೇಕು ಎಂಬ ಸಂದೇಶವನ್ನು ನೀಡುತ್ತಿದ್ದೇವೆ ಎಂದು ಹೇಳಿದರು. ಶ್ರೇಯಸ್ ಮತ್ತು ಸಂಜನಾ ಕದಂ ನಾಯಕ, ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ತಿಂಗಳ 20ರಿಂದ ಚನ್ನಪಟ್ಟಣ, ಮೈಸೂರು ಸುತ್ತಮುತ್ತ ಶೂಟಿಂಗ್‌ ನಡೆಯಲಿದೆ. ಹತ್ತು ದಿನದಲ್ಲಿ ಹಾಡು, ಫೈಟ್‌ಗಳನ್ನು ಚಿತ್ರೀಕರಿಸುವ ಉದ್ದೇಶವಿದೆ. ಈಗಾಗಲೇ ರಾಮು ಅಂಡ್ ರಾಮು ಚಿತ್ರ ಸೆನ್ಸಾರ್ ಆಗಿದೆ. ಇನ್ನು ‘ಕರೀಮಣಿ ಮಾಲೀಕ’ ಚಿತ್ರದ ಚಿತ್ರೀಕರಣ ಮುಗಿದಿದೆ ಎಂದು ಹೇಳಿದರು.

ADVERTISEMENT

ನಾಯಕ ಶ್ರೇಯಸ್ ಮಾತನಾಡಿ, ನಿರ್ದೇಶಕ ಓಬಯ್ಯ ಅವರು ನನಗಿನ್ನೂ ಕಥೆ ಹೇಳಿಲ್ಲ. ಒಳ್ಳೆಯ ಚಿತ್ರವಾಗುವ ವಿಶ್ವಾಸವಿದೆ ಎಂದು ಹೇಳಿದರು.

ನಾಯಕಿ ಸಂಜನಾ ಕದಂ ಮಾತನಾಡಿ, ರಂಗಭೂಮಿ‌ ಕಲಾವಿದೆ. ಮೈಸೂರಿನ ಹುಡುಗಿ, ಮಂಡ್ಯ ರಮೇಶ್ ಅವರ ನಟನಾದಲ್ಲಿ ಅಭಿನಯ ಕಲಿತಿದ್ದೇನೆ. ಮೊದಲ ಬಾರಿಗೆ ನಾಯಕಿಯಾಗುವ ಅವಕಾಶ ಸಿಕ್ಕಿದೆ. ಅದನ್ನು ಸದುಪಯೋಗಪಡಿಸಿಕೊಳ್ಳುತ್ತೇನೆ ಎಂದರು.

ಹಿರಿಯ ಕಲಾವಿದ ನಾಗೇಂದ್ರ ಅರಸ್ ಮಾತನಾಡಿ, ಕಿರಿತೆರೆಯಲ್ಲಿ ಬರುತ್ತಿರುವ ಬ್ರಹ್ಮಗಂಟು ಧಾರಾವಾಹಿಯಲ್ಲಿ ನಾಯಕಿಯ ಅಪ್ಪನ ಪಾತ್ರ ಮಾಡಿದ್ದೆ. ಈ ಚಿತ್ರದಲ್ಲಿ ನಾಯಕನ ಅಪ್ಪನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ ಎಂದರು. ಡಾ.ಚೇತನ್ ನಿಂಗೇಗೌಡ ನಿರ್ಮಾಣವಿದೆ. ಛಾಯಾಗ್ರಾಹಕ ನಿರಂಜನ್ ಬೋಪಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.