ಧನ್ವೀರ್, ರೀಷ್ಮಾ ನಾಣಯ್ಯ ಜೋಡಿಯಾಗಿ ನಟಿಸಿರುವ ‘ವಾಮನ’ ಚಿತ್ರದ ‘ಕಂದ ಕನಸ ರೂಪ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಶಂಕರ್ ರಾಮನ್ ಎಸ್ ನಿರ್ದೇಶನದ ಚಿತ್ರ ಬಿಡುಗಡೆಗೆ ಕೊನೆಗೂ ಮುಹೂರ್ತ ಕೂಡಿಬಂದಿದ್ದು, ಏ.10ರಂದು ತೆರೆಗೆ ಬರಲಿದೆ.
‘ಇದು ನನ್ನ ನಾಲ್ಕನೆ ಚಿತ್ರ. ನಟ ದರ್ಶನ್ ಮತ್ತು ವಿಜಯಲಕ್ಷ್ಮಿ ಅವರು ಈ ಚಿತ್ರಕ್ಕೆ ನೀಡಿದ ಬೆಂಬಲಕ್ಕೆ ಧನ್ಯವಾದಗಳು. ವಿಜಯಲಕ್ಷ್ಮಿ ಕೇಳಿದ ತಕ್ಷಣ ಬಂದು ಹಾಡು ಬಿಡುಗಡೆ ಮಾಡಿಕೊಟ್ಟಿದ್ದಾರೆ. ಹಿಂದಿನ ಮೂರು ಸಿನಿಮಾಗಳಲ್ಲಿಯೂ ಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದೆ. ಅದೇ ರೀತಿ ಚಿತ್ರದಲ್ಲಿಯೂ ಮಾಸ್ ಆಗಿರುವ ಒಂದು ಭಿನ್ನ ಪಾತ್ರ ಮಾಡಿರುವೆ. ಸಿನಿಮಾ ಚೆನ್ನಾಗಿ ಮೂಡಿಬಂದಿದೆ. ಹಾಡು ಎಲ್ಲರಿಗೂ ಇಷ್ಟವಾಗುತ್ತದೆ’ ಎಂದರು ನಾಯಕ ಧನ್ವೀರ್.
ತಾಯಿ - ಮಗನ ಬಾಂಧವ್ಯದ ಕಥೆ ಹೇಳುವ ಈ ಗೀತೆಗೆ ಪ್ರಮೋದ್ ಮರವಂತೆ ಸಾಹಿತ್ಯವಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ವೆಂಕಟೇಶ್ ಡಿ.ಸಿ ಈ ಹಾಡನ್ನು ಹಾಡಿದ್ದಾರೆ. ಚೇತನ್ ಗೌಡ ಬಂಡವಾಳ ಹೂಡಿದ್ದಾರೆ. ಪೆಟ್ರೋಲ್ ಪ್ರಸನ್ನ, ಶಿವರಾಜ್ ಕೆ.ಆರ್ ಪೇಟೆ, ಕಾಕ್ರೋಜ್ ಸುಧೀ ಮುಂತಾದವರು ತಾರಾಗಣದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.