ADVERTISEMENT

‘ವರ್ಣ’ಕ್ಕೆ ಭಗವದ್ಗೀತೆಯೇ ಸ್ಫೂರ್ತಿ: ನಿರ್ದೇಶಕ ದೇವ ಶರ್ಮಾ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2025, 0:19 IST
Last Updated 29 ಅಕ್ಟೋಬರ್ 2025, 0:19 IST
<div class="paragraphs"><p>ಅರ್ಜುನ್ ಯೋಗಿ, ಭವ್ಯಾ</p></div>

ಅರ್ಜುನ್ ಯೋಗಿ, ಭವ್ಯಾ

   

ನಾಲ್ಕು ಸಿನಿಮಾಗಳಲ್ಲಿ ನಾಯಕನಾಗಿ ಹಾಗೂ ಧಾರಾವಾಹಿಗಳಲ್ಲಿ ನಟಿಸಿರುವ ಅರ್ಜುನ್‌ ಯೋಗಿ ನಟನೆಯ ‘ವರ್ಣ’ ಸಿನಿಮಾದ ಟೀಸರ್‌ ಇತ್ತೀಚೆಗೆ ಬಿಡುಗಡೆಗೊಂಡಿತು. 

ದೇವ ಶರ್ಮಾ ನಿರ್ದೇಶಿಸಿರುವ ಈ ಸಿನಿಮಾವನ್ನು ಮಲ್ಲಿನೇನಿ ನವೀನ್ ಚೌಧರಿ ನಿರ್ಮಿಸಿದ್ದಾರೆ. ‘ಭಗವದ್ಗೀತೆಯಲ್ಲಿ ಹೇಳಿರುವ ‘ಕರ್ಮಣ್ಯೇವಾಧಿಕಾರಸ್ತೇ ಮಾಫಲೇಷು ಕದಾಚನ’ ಎಂಬ ಮಾತೇ ಈ ಚಿತ್ರದ ಕಥೆಗೆ ಸ್ಫೂರ್ತಿ‘ ಎಂದು ಮಾತು ಆರಂಭಿಸಿದ ದೇವ ಶರ್ಮಾ, ‘ಮೊದಲು ಇದನ್ನು ಕಿರುಚಿತ್ರ ಮಾಡಲು ಹೊರಟಿದ್ದೆವು. ಆದರೆ ಕಥೆ ಕೇಳಿದ ನಿರ್ಮಾಪಕರು ಕಥೆ ಚೆನ್ನಾಗಿದೆ, ಕಿರುಚಿತ್ರ ಬೇಡ.‌ ಸಿನಿಮಾದಂತೆಯೇ ಯಾವುದೇ ಕೊರತೆ ಇಲ್ಲದ ರೀತಿ ನಿರ್ಮಾಣ ಮಾಡಲು ನಿರ್ಧರಿಸಿದರು. ಚಿತ್ರದಲ್ಲಿ ನಾಯಕಿಯಾಗಿ ಭವ್ಯ ಗೌಡ ನಟಿಸಿದ್ದು, ವಿಲನ್ ಪಾತ್ರದಲ್ಲಿ ಲಂಕೇಶ್ ರಾವಣ ನಟಿಸಿದ್ದಾರೆ. ರಮೇಶ್ ಕೃಷ್ಣ ಸಂಗೀತ ನಿರ್ದೇಶನ, ಗೌರಿ ವೆಂಕಟೇಶ್ ಛಾಯಾಚಿತ್ರಗ್ರಹಣ, ಸುಜಿತ್ ನಾಯಕ್ ಸಂಕಲನ ಚಿತ್ರಕ್ಕಿದೆ. ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ಸದ್ಯದಲ್ಲೇ ಹಾಡುಗಳು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ’ ಎಂದರು.

ADVERTISEMENT

‘ಹತ್ತು ವರ್ಷಗಳ ಹಿಂದೆ ತೆರೆಕಂಡ ‘ಸಂಜೆಯಲ್ಲಿ ಅರಳಿದ ಹೂವು’ ನಾನು ನಾಯಕನಾಗಿ ನಟಿಸಿದ ಮೊದಲ ಚಿತ್ರ. ಇದು ಐದನೇ ಚಿತ್ರ. ಚಿತ್ರದಲ್ಲಿ ನನ್ನ ಪಾತ್ರದ ಹೆಸರು ‘ವರ್ಣ’. ತಪ್ಪನ್ನು ಸಹಿಸದ, ತಪ್ಪು ಮಾಡಿದವರನ್ನು ಬಿಡದ ಹಳ್ಳಿ ಹುಡುಗನಾಗಿ ಅಭಿನಯಿಸಿದ್ದೇನೆ. ಇದೊಂದು ಹಳ್ಳಿ ಸೊಗಡಿನ ಕಥೆ’ ಎನ್ನುತ್ತಾರೆ ಅರ್ಜುನ್ ಯೋಗಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.